ರಾಜ್ಯ ವಿಧಾನಸಭೆ ಚುನಾವಣೆಯ ಜಿದ್ದಾಜಿದ್ದಿನ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಇತರರ ಅಬ್ಬರದ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ.
ಯಾವುದಕ್ಕೆಲ್ಲ ನಿರ್ಬಂಧ? : ಮತದಾನಕ್ಕೆ ಕೆಲವೇ ಗಂಟೆಗಳು ಉಳಿದಿರುವ ಈ ಸಂದರ್ಭದಲ್ಲಿ ಯಾವುದಕ್ಕೆಲ್ಲ ನಿರ್ಬಂಧ ಹೇರಲಾಗಿದೆ ಎಂಬ ಬಗ್ಗೆ ಚುನಾವಣಾ ಆಯೋಗದ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಸಂಜೆ 5 ಗಂಟೆಯ ಬಳಿಕ ಸಭೆ, ಸಮಾರಂಭ, ಉತ್ಸವ, ರ‍್ಯಾಲಿ ಮತ್ತು ಧ್ವನಿವರ್ಧಕಗಳನ್ನು ಬಳಸಿ ಪ್ರಚಾರ ಮಾಡುವಂತಿಲ್ಲ ಎಂದು ಆಯೋಗ ಸೂಚಿಸಿದೆ. ಆಯಾ ವಿಧಾನಸಭೆ ಕ್ಷೇತ್ರದಲ್ಲಿ ಅಲ್ಲಿನ ಅಭ್ಯರ್ಥಿ ಹೊರತುಪಡಿಸಿ ಬೇರೆ ನಾಯಕರು ಬಂದು ಪ್ರಚಾರ ಮಾಡುವುದಕ್ಕೂ ನಿರ್ಬಂಧ ಹೇರಿದೆ. ಅಭ್ಯರ್ಥಿ ಸೇರಿದಂತೆ 6 ಜನರು ಮಾತ್ರ ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಆಯೋಗ ಅವಕಾಶ ನೀಡಿದೆ.
ಯಾವುದೇ ರೀತಿಯ ಬಹಿರಂಗ ಸಭೆ, ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಮೇ 8 ಸಂಜೆ 6 ಗಂಟೆಯ ನಂತರ ಮೇ 10ರಂದು ಮತದಾನ ಪ್ರಕ್ರಿಯೆ ಮುಗಿಯುವ ವರೆಗೆ ಮದ್ಯ ಮಾರಾಟ ಮಾಡುವಂತಿಲ್ಲ. 48 ಗಂಟೆಗಳ ಕಾಲ ಧ್ವನಿವರ್ಧಕ ಬಳಕೆಗೆ ಅನುಮತಿ ಇಲ್ಲ. ಅಭ್ಯರ್ಥಿಗಳ ನಡುವಣ ದ್ವೇಷ ಹೆಚ್ಚಿಸುವಂಥ ಹಾಗೂ ದ್ವೇಷ ಸೃಷ್ಟಿಸುವಂತಹ ಯಾವುದೇ ಚಟುವಟಿಕೆ ನಡೆಸಬಾರದು.ಸೂಕ್ಷ್ಮ ಪ್ರದೇಶಗಳ ಮತಕೇಂದ್ರಗಳನ್ನು ಸಿಸಿಟಿವಿ ಕ್ಯಾಮರಾ ಮೂಲಕ ನಿರಂತರ ಕಣ್ಗಾವಲಿನಲ್ಲಿ ಇರಿಸಬೇಕು
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…