ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

August 15, 2025
6:54 AM

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಶಿಫಾರಸ್ಸಿನಂತೆ ರಾಜ್ಯದ ಎಲ್ಲಾ ಕ್ಷೇತ್ರಗಳ ಸೀಮಾ ಗಡಿ,  ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಸದಸ್ಯರ ಸಂಖ್ಯೆ ನಿಗದಿ ಪಡಿಸುವ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮಕ್ಕೆ ತಿದ್ದುಪಡಿ ತರಲಾಗಿದೆ. ಜೊತೆಗೆ ಕ್ಷೇತ್ರಗಳ ಸೀಮಾ ಗಡಿಯನ್ನು ಗುರುತಿಸಿ ಅಧಿಸೂಚಿಸಲಾಗಿದೆ. ಕ್ಷೇತ್ರಗಳ ಮೀಸಲು ನಿಗದಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅದು ಪೂರ್ಣಗೊಂಡ ನಂತರ ಚುನಾವಣೆ ನಡೆಸಲಾಗುವುದು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror