ಚುನಾವಣಾ ಆಯೋಗ ನಿರ್ದೇಶನದನ್ವಯ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ ಇದೇ ನ.28 ರೊಳಗಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮತದಾರರ ಪಟ್ಟಿ ವಿಶೇಷ ವೀಕ್ಷಕರಾದ ಡಾ. ಶಮ್ಲಾ ಇಕ್ಬಾಲ್ ದಾವಣಗೆರೆಯಲ್ಲಿ ತಿಳಿಸಿದ್ದಾರೆ. ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತ ಮಾತನಾಡಿದ ಅವರು, ಅಕ್ಟೋಬರ್ 29 ರಂದು ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿದೆ. ನವೆಂಬರ್ 28 ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕರು ತಮ್ಮ ಮತಗಟ್ಟೆ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳನ್ನು ಭೇಟಿ ಮಾಡಿ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel