ರಾಜ್ಯದಲ್ಲಿ ಪರಿಸರ ಸ್ನೇಹಿ ಇಲೆಕ್ಟ್ರಿಕಲ್ ಬಸ್‍ ಸಂಚಾರ |

October 11, 2022
10:20 PM

ಒಂದು ತಿಂಗಳೊಳಗೆ ರಾಜ್ಯದಲ್ಲಿ ಪರಿಸರ ಸ್ನೇಹಿ ಇಲೆಕ್ಟ್ರಿಕಲ್ ಬಸ್‍ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಅವರು ಹೇಳಿದ್ದಾರೆ.

Advertisement

ಅವರು ಮಂಗಳೂರಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿರುವ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಂದಿನ ತಿಂಗಳೊಳಗೆ ಮೊದಲ ಹಂತದಲ್ಲಿ 50 ಇಲೆಕ್ಟ್ರಿಕಲ್ ಬಸ್‍ಗಳ ಸಂಚಾರ ಆರಂಭಿಸಲಾಗುವುದು, ಸದ್ಯ ತೈಲೋತ್ಪನ್ನ, ಟಯರ್ ಹಾಗೂ ಬಸ್ ಬಿಡಿ ಭಾಗಗಳ ಮೊತ್ತ ಹೆಚ್ಚಿದ್ದರೂ ಕೂಡ ಪ್ರಯಾಣಿಕರ ಹಿತ ದೃಷ್ಟಿಯಿಂದ ಪ್ರಯಾಣಿಕರ ಟಿಕೆಟ್ ದರ ಹೆಚ್ಚಿಸಿಲ್ಲ, ಅರವತ್ತು ವರ್ಷಗಳ ಇತಿಹಾಸದಲ್ಲೇ ಇದೀಗ ತಿಂಗಳ ಮೊದಲ ದಿನವೇ ರಾಜ್ಯದ ಎಲ್ಲ ಕೆ.ಎಸ್.ಆರ್.ಟಿ.ಸಿ ಉದ್ಯೋಗಿಗಳಿಗೆ ವೇತನ ನೀಡಲಾಗುತ್ತಿದೆ ಮತ್ತು 6ವೇತನ ಆಯೋಗದ ಬೇಡಿಕೆಯನ್ನು ಮುಂದಿನ ದಿನಗಳಲ್ಲಿ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಕೋವಿಡ್ ಹಾಗೂ ಇತರೆ ಕಾರಣಗಳಿಂದ ಈ ಹಿಂದೆ ಸರ್ಕಾರಿ ಬಸ್‍ಗಳಿಂದ ದಿನವೊಂದಕ್ಕೆ 6 ರಿಂದ 7ಕೋಟಿಗಳಷ್ಟು ಆದಾಯ ಬರುತ್ತಿತ್ತು, ಆದರೆ ಸದ್ಯ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡ ಕಾರಣ ದಿನವೊಂದಕ್ಕೆ ಕನಿಷ್ಟ 12ಕೋಟಿಯಷ್ಟು ವರಮಾನ ಬರುತ್ತಿದೆ ಎಂದರು.

450 ನೂತನ ಬಸ್ ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ, ಅವುಗಳಲ್ಲಿ ಅತ್ಯುತ್ತಮ ಸೌಲಭ್ಯವಿರುವ 50 ಓಲ್ವೋ ಹಾಗೂ ಎಲೆಕ್ಟ್ರಿಕಲ್ ಬಸ್‍ಗಳಿರಲಿವೆ. ಒಂದು ತಿಂಗಳಿನೊಳಗೆ ರಾಜ್ಯದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್ ಬಸ್‍ಗಳು ಓಡಾಡಲಿವೆ, ಮಂಗಳೂರು ವಿಭಾಗದಲ್ಲಿ ಸದ್ಯ 490 ಬಸ್‍ಗಳು ಪ್ರತಿದಿನ ಸಂಚರಿಸುತ್ತಿದ್ದು, ದಿನನಿತ್ಯ 1 ಕೋಟಿಯಷ್ಟು ವರಮಾನವಿದೆ, ಆದರೆ ಪುತ್ತೂರು ವಿಭಾಗದಲ್ಲಿ ವರಮಾನ ಕಡಿಮೆಯಿದ್ದರೂ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿರುವ ಕಾರಣ ಬಸ್‍ಗಳನ್ನು ಕಡಿತಗೊಳಿಸಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರ ಕೂಲಿ ಉಳಿತಾಯಕ್ಕಾಗಿ ಉಚಿತ ಪಾಸ್ ವಿತರಿಸಲು ಚಿಂತಿಸಲಾಗಿದೆ. ಸದ್ಯ 1 ಲಕ್ಷ ಉಚಿತ ಪಾಸ್ ವಿತರಿಸಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದು ಇನ್ನುಳಿದಂತೆ ರಾಜ್ಯದಲ್ಲಿರುವ ಒಟ್ಟು 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಪಾಸ್ ವಿತರಿಸಲಾಗುವುದು. ಒಟ್ಟಾರೆ ನೂತನವಾಗಿ ಕೈಗೊಂಡಿರುವ ಹಲವು ಸುಧಾರಣಾ ಕ್ರಮಗಳಿಂದಾಗಿ ಸಧ್ಯ ಅನವಶ್ಯಕ ಖರ್ಚುವೆಚ್ಚಗಳು ಕಡಿಮೆಯಾಗಿದೆ ಎಂದರು.

ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಹಾಗೂ ಪುತ್ತೂರು ವಿಭಾಗಿಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಗೋಷ್ಠಿಯಲ್ಲಿದ್ದರು.

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2025 ರಲ್ಲಿ ಲಕ್ಷ್ಮಿ ನಾರಾಯಣ ಯೋಗ | ಮಹಾಸಪ್ತಮಿ ದಿನದ ವಿಶೇಷ ಲಾಭ
April 5, 2025
9:48 AM
by: ದ ರೂರಲ್ ಮಿರರ್.ಕಾಂ
ಹಬ್ಬದ ದಿನ 2 ಲಕ್ಷ ಸಸಿ ವಿತರಿಸಿದ ಅರಣ್ಯ ಇಲಾಖೆ
April 5, 2025
8:06 AM
by: The Rural Mirror ಸುದ್ದಿಜಾಲ
ಹೊಸರುಚಿ | ಎಳೆಯ ಹಲಸಿನ ಕಾಯಿ ಪಕೋಡ
April 5, 2025
8:00 AM
by: ದಿವ್ಯ ಮಹೇಶ್
ಹವಾಮಾನ ಕೇಂದ್ರಗಳು, ಮಳೆ ಮಾಪನ ಕೇಂದ್ರಗಳನ್ನು ಸ್ಥಾಪಿಸುವಂತೆ ಮನವಿ
April 5, 2025
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group