ಒಂದು ತಿಂಗಳೊಳಗೆ ರಾಜ್ಯದಲ್ಲಿ ಪರಿಸರ ಸ್ನೇಹಿ ಇಲೆಕ್ಟ್ರಿಕಲ್ ಬಸ್‍ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಅವರು ಹೇಳಿದ್ದಾರೆ.
ಅವರು ಮಂಗಳೂರಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿರುವ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಂದಿನ ತಿಂಗಳೊಳಗೆ ಮೊದಲ ಹಂತದಲ್ಲಿ 50 ಇಲೆಕ್ಟ್ರಿಕಲ್ ಬಸ್‍ಗಳ ಸಂಚಾರ ಆರಂಭಿಸಲಾಗುವುದು, ಸದ್ಯ ತೈಲೋತ್ಪನ್ನ, ಟಯರ್ ಹಾಗೂ ಬಸ್ ಬಿಡಿ ಭಾಗಗಳ ಮೊತ್ತ ಹೆಚ್ಚಿದ್ದರೂ ಕೂಡ ಪ್ರಯಾಣಿಕರ ಹಿತ ದೃಷ್ಟಿಯಿಂದ ಪ್ರಯಾಣಿಕರ ಟಿಕೆಟ್ ದರ ಹೆಚ್ಚಿಸಿಲ್ಲ, ಅರವತ್ತು ವರ್ಷಗಳ ಇತಿಹಾಸದಲ್ಲೇ ಇದೀಗ ತಿಂಗಳ ಮೊದಲ ದಿನವೇ ರಾಜ್ಯದ ಎಲ್ಲ ಕೆ.ಎಸ್.ಆರ್.ಟಿ.ಸಿ ಉದ್ಯೋಗಿಗಳಿಗೆ ವೇತನ ನೀಡಲಾಗುತ್ತಿದೆ ಮತ್ತು 6ವೇತನ ಆಯೋಗದ ಬೇಡಿಕೆಯನ್ನು ಮುಂದಿನ ದಿನಗಳಲ್ಲಿ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಕೋವಿಡ್ ಹಾಗೂ ಇತರೆ ಕಾರಣಗಳಿಂದ ಈ ಹಿಂದೆ ಸರ್ಕಾರಿ ಬಸ್‍ಗಳಿಂದ ದಿನವೊಂದಕ್ಕೆ 6 ರಿಂದ 7ಕೋಟಿಗಳಷ್ಟು ಆದಾಯ ಬರುತ್ತಿತ್ತು, ಆದರೆ ಸದ್ಯ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡ ಕಾರಣ ದಿನವೊಂದಕ್ಕೆ ಕನಿಷ್ಟ 12ಕೋಟಿಯಷ್ಟು ವರಮಾನ ಬರುತ್ತಿದೆ ಎಂದರು.
450 ನೂತನ ಬಸ್ ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ, ಅವುಗಳಲ್ಲಿ ಅತ್ಯುತ್ತಮ ಸೌಲಭ್ಯವಿರುವ 50 ಓಲ್ವೋ ಹಾಗೂ ಎಲೆಕ್ಟ್ರಿಕಲ್ ಬಸ್‍ಗಳಿರಲಿವೆ. ಒಂದು ತಿಂಗಳಿನೊಳಗೆ ರಾಜ್ಯದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್ ಬಸ್‍ಗಳು ಓಡಾಡಲಿವೆ, ಮಂಗಳೂರು ವಿಭಾಗದಲ್ಲಿ ಸದ್ಯ 490 ಬಸ್‍ಗಳು ಪ್ರತಿದಿನ ಸಂಚರಿಸುತ್ತಿದ್ದು, ದಿನನಿತ್ಯ 1 ಕೋಟಿಯಷ್ಟು ವರಮಾನವಿದೆ, ಆದರೆ ಪುತ್ತೂರು ವಿಭಾಗದಲ್ಲಿ ವರಮಾನ ಕಡಿಮೆಯಿದ್ದರೂ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿರುವ ಕಾರಣ ಬಸ್‍ಗಳನ್ನು ಕಡಿತಗೊಳಿಸಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರ ಕೂಲಿ ಉಳಿತಾಯಕ್ಕಾಗಿ ಉಚಿತ ಪಾಸ್ ವಿತರಿಸಲು ಚಿಂತಿಸಲಾಗಿದೆ. ಸದ್ಯ 1 ಲಕ್ಷ ಉಚಿತ ಪಾಸ್ ವಿತರಿಸಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದು ಇನ್ನುಳಿದಂತೆ ರಾಜ್ಯದಲ್ಲಿರುವ ಒಟ್ಟು 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಪಾಸ್ ವಿತರಿಸಲಾಗುವುದು. ಒಟ್ಟಾರೆ ನೂತನವಾಗಿ ಕೈಗೊಂಡಿರುವ ಹಲವು ಸುಧಾರಣಾ ಕ್ರಮಗಳಿಂದಾಗಿ ಸಧ್ಯ ಅನವಶ್ಯಕ ಖರ್ಚುವೆಚ್ಚಗಳು ಕಡಿಮೆಯಾಗಿದೆ ಎಂದರು.
ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಹಾಗೂ ಪುತ್ತೂರು ವಿಭಾಗಿಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಗೋಷ್ಠಿಯಲ್ಲಿದ್ದರು.
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ ಚಿಕ್ಕ ದಾಗಿ ಕಟ್…