2030ರ ವೇಳೆಗೆ ದೇಶದಲ್ಲಿ ಎಲೆಕ್ಟ್ರಿಕ್ ವಾಹನ ವಲಯ | 4 ಕೋಟಿ ಉದ್ಯೋಗಾವಕಾಶ ಸೃಷ್ಟಿಸುವ ನಿರೀಕ್ಷೆ

December 9, 2024
7:44 PM

2030ರ ವೇಳೆಗೆ ಎಲೆಕ್ಟ್ರಿಕ್ ವಾಹನ ವಲಯ ದೇಶದಲ್ಲಿ ಸುಮಾರು 4 ಕೋಟಿ ಉದ್ಯೋಗಾವಕಾಶ ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

Advertisement
Advertisement

ನಾಗ್ಪುರ್ ದಲ್ಲಿ ‘ ಎಲೆಕ್ಟ್ರಿಕ್ ವಾಹನಗಳ ಅಗ್ನಿ ಅವಘಡ ನಿರ್ವಹಣೆ ‘ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪ್ರಸ್ತುತ ದೇಶದಲ್ಲಿ ಸುಮಾರು 30 ಲಕ್ಷ ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ, ಎಲೆಕ್ಟ್ರಿಕ್ ವಾಹನ ಖರೀದಿಯಲ್ಲಿ ಈ ಬಾರಿ ಶೇಕಡ 45ರಷ್ಟು ಏರಿಕೆಯಾಗಿದೆ ಎಂದರು. ದೇಶಾದ್ಯಂತ 400ಕ್ಕೂ ಹೆಚ್ಚು ಸ್ಟಾರ್ಟ್ ಅಪ್ ಗಳು ಈ ವಲಯದಲ್ಲಿ ಆರಂಭಗೊಂಡಿದ್ದು, ಮುಂದಿನ ವರ್ಷದ ವೇಳೆಗೆ ಮಾರುಕಟ್ಟೆಯಲ್ಲಿ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವಾಹನಗಳ ಪಾಲು ಶೇಕಡ 8ಕ್ಕಿಂತ ಹೆಚ್ಚಾಗಲಿದೆ ಎಂದು ತಿಳಿಸಿದರು. ಕಳೆದ 3 ವರ್ಷಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದಂತೆ 30 ಅಗ್ನಿ ಅವಘಡಗಳು ವರದಿಯಾಗಿದ್ದು, ಇ – ವಾಹನ ಮಾರುಕಟ್ಟೆಯ ಮೇಲೆ ಪ್ರಭಾವ ಬೀರಿದೆ.  ಈ ನಿಟ್ಟಿನಲ್ಲಿ ಬ್ಯಾಟರಿ ಸುರಕ್ಷತೆಯ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ DRDO ಮತ್ತು IIT ಗಳು ಕ್ರಮ ವಹಿಸಿವೆ ಎಂದು ಸಚಿವರು ಹೇಳಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ
July 29, 2025
8:46 PM
by: The Rural Mirror ಸುದ್ದಿಜಾಲ
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ
July 29, 2025
8:34 PM
by: The Rural Mirror ಸುದ್ದಿಜಾಲ
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ
July 29, 2025
8:25 PM
by: The Rural Mirror ಸುದ್ದಿಜಾಲ
ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ
July 29, 2025
8:19 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group