2030ರ ವೇಳೆಗೆ ಎಲೆಕ್ಟ್ರಿಕ್ ವಾಹನ ವಲಯ ದೇಶದಲ್ಲಿ ಸುಮಾರು 4 ಕೋಟಿ ಉದ್ಯೋಗಾವಕಾಶ ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ನಾಗ್ಪುರ್ ದಲ್ಲಿ ‘ ಎಲೆಕ್ಟ್ರಿಕ್ ವಾಹನಗಳ ಅಗ್ನಿ ಅವಘಡ ನಿರ್ವಹಣೆ ‘ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪ್ರಸ್ತುತ ದೇಶದಲ್ಲಿ ಸುಮಾರು 30 ಲಕ್ಷ ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ, ಎಲೆಕ್ಟ್ರಿಕ್ ವಾಹನ ಖರೀದಿಯಲ್ಲಿ ಈ ಬಾರಿ ಶೇಕಡ 45ರಷ್ಟು ಏರಿಕೆಯಾಗಿದೆ ಎಂದರು. ದೇಶಾದ್ಯಂತ 400ಕ್ಕೂ ಹೆಚ್ಚು ಸ್ಟಾರ್ಟ್ ಅಪ್ ಗಳು ಈ ವಲಯದಲ್ಲಿ ಆರಂಭಗೊಂಡಿದ್ದು, ಮುಂದಿನ ವರ್ಷದ ವೇಳೆಗೆ ಮಾರುಕಟ್ಟೆಯಲ್ಲಿ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವಾಹನಗಳ ಪಾಲು ಶೇಕಡ 8ಕ್ಕಿಂತ ಹೆಚ್ಚಾಗಲಿದೆ ಎಂದು ತಿಳಿಸಿದರು. ಕಳೆದ 3 ವರ್ಷಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದಂತೆ 30 ಅಗ್ನಿ ಅವಘಡಗಳು ವರದಿಯಾಗಿದ್ದು, ಇ – ವಾಹನ ಮಾರುಕಟ್ಟೆಯ ಮೇಲೆ ಪ್ರಭಾವ ಬೀರಿದೆ. ಈ ನಿಟ್ಟಿನಲ್ಲಿ ಬ್ಯಾಟರಿ ಸುರಕ್ಷತೆಯ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ DRDO ಮತ್ತು IIT ಗಳು ಕ್ರಮ ವಹಿಸಿವೆ ಎಂದು ಸಚಿವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…