ಕಾಂಗ್ರೆಸ್ ಪಕ್ಷ ಪ್ರತೀ ಜನತೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡೋದಾಗಿ ಭರವಸೆ ನೀಡಿತ್ತು. ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ರಾಜ್ಯದ ಪ್ರತೀ ಮನೆಗೆ ಉಚಿತವಾಗಿ ನೀಡುವುದಾಗಿ ಘೋಷಿಸಿದೆ. ಅದರ ಜೊತೆಗೇ ಜೂ 1ರಿಂದಲೇ ವಿದ್ಯುತ್ ದರ ಹೆಚ್ಚಳ ಜಾರಿಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ ಪ್ರತಿ ಯೂನಿಟ್ ಗೆ 70 ಪೈಸೆ ದರ ಏರಿಕೆ ಮಾಡಿ ಮೇ 12ರಂದು ಆದೇಶ ಪ್ರಕಟಿಸಿತ್ತು. ನಷ್ಟದ ಕಾರಣ ನೀಡಿ ದರ ಹೆಚ್ಚಳ ಮಾಡಲಾಗಿತ್ತು. ಇದೀಗ ಹೊಸ ಪರಿಷ್ಕೃತ ದರವನ್ನು ಜೂನ್ 1ರಿಂದ ಅನ್ವಯವಾಗುವಂತೆ ಆದೇಶ ಪ್ರಕಟಿಸಲಾಗಿದೆ. ಏಪ್ರಿಲ್ 1ರಿಂದಲೇ ಹೊಸ ವಿದ್ಯುತ್ ದರ ಅನ್ವಯ ಎಂದು ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ ಮಾಹಿತಿ ನೀಡಿತ್ತು. ಆದರೆ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದ ಹಿನ್ನೆಲೆಯಲ್ಲಿ ಜೂನ್ 1ರಿಂದ ಪರಿಷ್ಕೃತ ದರ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel