ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ಬೆಲೆಯನ್ನು ಪ್ರತಿ ಯುನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ, ಇಂದು ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ. ಮುಂದಿನ ಮೂರು ಆರ್ಥಿಕ ವರ್ಷಗಳಿಗೆ ಅನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯನ್ನು ಬಿಜೆಪಿ ಖಂಡಿಸಿದೆ. ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಮತ್ತೊಂದೆಡೆ ದರ ಹೆಚ್ಚಿಸಿ ಗ್ರಾಹಕರ ಮೇಲೆ ಹೊರೆ ಹೊರಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel