ಗೃಹಜ್ಯೋತಿ ಇದ್ದರೂ ರಾಜ್ಯದ ಜನತೆಗೆ ವಿದ್ಯುತ್‌ ಶಾಕ್…! | ಇಂದು ವಿದ್ಯುತ್‌ ದರ ಪರಿಷ್ಕರಣೆ ಪ್ರಕಟ ಸಾಧ್ಯತೆ |

February 28, 2024
2:00 PM

ಕಾಂಗ್ರೆಸ್‌ ಸರ್ಕಾರದ(Congress Govt) ಉಚಿತ ವಿದ್ಯುತ್‌ ಯೋಜನೆ ಗೃಹಜ್ಯೋತಿ((Gruha Jyothi Scheme) ಇದೆ ಎಂದು ವಿದ್ಯುತ್‌ ಬಿಲ್‌(Electricity Price) ಕಡಿಮೆ ಬರುತ್ತಿದೆ ಎಂದು ಬೀಗುತ್ತಿರುವ ಜನತೆಗೆ ರಾಜ್ಯ ಸರ್ಕಾರ, ವಿದ್ಯುತ್‌ ಶಾಕ್‌ ನೀಡಲು ಮುಂದಾಗಿದೆ. ಲೋಕಸಭಾ ಚುನಾವಣೆ (LokSabha Elections) ಹಿನ್ನೆಲೆಯಲ್ಲಿ ಈ ಬಾರಿ ಅವಧಿಗೆ ಮುಂಚಿತವಾಗಿಯೇ ವಿದ್ಯುತ್‌ ದರ ಪರಿಷ್ಕರಣೆ ಮಾಡಲು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ ಮುಂದಾಗಿದೆ. ಇಂದು  ಸಂಜೆಯೇ ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ (KERC) ವಿದ್ಯುತ್‌ ದರ ಪರಿಷ್ಕರಣೆ ಪ್ರಕಟಿಸಲಿದೆ ಎಂದು ಹೇಳಲಾಗಿದೆ.

Advertisement
Advertisement

ಪ್ರತಿ ವರ್ಷ ಏಪ್ರಿಲ್‌ನಲ್ಲಿ ವಿದ್ಯುತ್‌ ದರ ಪರಿಷ್ಕರಣೆಯಾಗುತ್ತಿತ್ತು. ಆದ್ರೆ ಈ ಬಾರಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವಧಿಗೆ ಮುಂಚಿತವಾಗಿಯೇ ವಿದ್ಯುತ್‌ ದರ ಪರಿಷ್ಕರಣೆಯಾಗಲಿದೆ. ಬುಧವಾರ ಪರಿಷ್ಕೃತ ದರ ಪ್ರಕಟವಾದರೂ ಏಪ್ರಿಲ್‌ನಿಂದ ಅನ್ವಯವಾಗಲಿದೆ. ಗೃಹಜ್ಯೋತಿ  ನಡುವೆಯೂ ವಿದ್ಯುತ್‌ ದರ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

Advertisement

ಕಳೆದ ವರ್ಷ ಆಗಸ್ಟ್‌ 5ರಂದು ಗೃಹಜ್ಯೋತಿ ಯೋಜನೆಗೆ ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿತ್ತು. ವಿದ್ಯುತ್‌ ಪೂರೈಕೆಗಾಗಿ ಬೆಸ್ಕಾಂ 235.07 ಮೆಸ್ಕಾಂ 52.73, ಹೆಸ್ಕಾಂ 82.02, ಜೆಸ್ಕಾಂ 53.46, ಚೆಸ್ಕಾಂ 51.26, ಹುಕ್ಕೇರಿ 1.46 ಕೋಟಿ ರೂ. ಸಹಾಯಧನ ಬಿಡುಗಡೆ ಮಾಡಿತ್ತು.

ಗೃಹಜ್ಯೋತಿಗೆ ಇರುವ ಷರತ್ತುಗಳೇನು?: ಗೃಹಜ್ಯೋತಿ ಯೋಜನೆಗೆ ವಾರ್ಷಿಕ ಸರಾಸರಿ ಮಾನದಂಡವಿದೆ. 12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ 10% ರಷ್ಟು ವಿದ್ಯುತ್‌ ಉಚಿತವಾಗಿ ನೀಡಲಾಗುವುದು. ಯಾರು ಎಷ್ಟು ವಿದ್ಯುತ್ ಬಳಸುತ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ 10% ರಷ್ಟು ವಿದ್ಯುತ್ ಉಚಿತವಾಗಿ ಕೊಡಲಾಗುವುದು. ಉದಾಹರಣೆಗೆ, 70 ಯೂನಿಟ್‌ ಬಳಸುವವರು ಅದಕ್ಕೆ 10% (ಅಂದರೆ ಒಟ್ಟು 80%) ಬಳಕೆ ಮಾಡಬಹುದು. ಕಳೆದ ವರ್ಷ ಸರಾಸರಿ ತಿಂಗಳಿಗೆ 100 ಯೂನಿಟ್ ಬಳಸಿದ್ದವರು ಈಗ 110 ಯೂನಿಟ್ ಬಳಸಿದ್ರೆ ವಿದ್ಯುತ್ ಉಚಿತವಾಗಿ ಸಿಗುತ್ತದೆ. ಒಂದು ವೇಳೆ 110ಕ್ಕಿಂತ ಹೆಚ್ಚು ಯೂನಿಟ್ ಬಳಸಿದ್ರೆ ಹೆಚ್ಚುವರಿ ಯೂನಿಟ್‌ಗೆ ಬಿಲ್ ಕಟ್ಟಬೇಕು. ಹೀಗೆ 200 ಯೂನಿಟ್‌ ವರೆಗೆ ವಿದ್ಯುತ್‌ ಬಳಸುವವರು ಬಿಲ್‌ ಕಟ್ಟುವಂತಿಲ್ಲ. 200 ಯೂನಿಟ್‌ ಉಚಿತ ಅಂತ ಎಲ್ಲರೂ ಬೇಕಾಬಿಟ್ಟಿ ವಿದ್ಯುತ್‌ ಬಳಸುವಂತಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

Advertisement

– ಅಂತರ್ಜಾಲ ಮಾಹಿತಿ

In the background of Lok Sabha Elections, the Karnataka Electricity Regulatory Commission has come forward to revise the electricity rates ahead of schedule this time. It is said that the Karnataka Electricity Regulatory Commission (KERC) will announce the electricity tariff revision this evening itself.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ
ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror