2021 ರಲ್ಲಿ ಭಾರತದಾದ್ಯಂತ ಬೇಟೆಗಾರರಿಗೆ ಸುಮಾರು 49 ಆನೆಗಳನ್ನು ಬಲಿಯಾಗಿವೆ. ಈ ಸಂಬಂಧ ಕಾನೂನು ಜಾರಿ ಸಂಸ್ಥೆಗಳು 77 ಆರೋಪಿಗಳನ್ನು ಬಂಧಿಸಿದೆ ಎಂದು ಕೇಂದ್ರ ಸರ್ಕಾರದ ಏಜೆನ್ಸಿ ತಿಳಿಸಿದೆ.
ದೇಶದಲ್ಲಿ ಆನೆಗಳ ಸಹಿತ ಕಾಡುಪ್ರಾಣಿಗಳ ಬೇಟೆಯಾಡುವ ಪರಿಸ್ಥಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನೋಯ್ಡಾ ಮೂಲದ ಸಾಮಾಜಿಕ ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತ ರಂಜನೆ ತೋಮರ್ ಅವರು ತಮ್ಮ ನೈಸರ್ಗಿಕ ಆವಾಸ ಸ್ಥಾನದಲ್ಲಿ ಆನೆಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಡಬ್ಲ್ಯುಸಿಸಿಬಿ ಯಿಂದ ಮಾಹಿತಿಯನ್ನು ಪಡೆದಿದ್ದರು.
ಪರಿಸರ, ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಡಬ್ಲ್ಯುಸಿಸಿವಿ ಅಥವಾ ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ ಆರ್‌ಟಿಐ ಮೂಲಕ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಅಸ್ಸಾಂ 9, ಪಶ್ಚಿಮ ಬಂಗಾಳ, ಒಡಿಶಾ ಮತ್ತು ತಮಿಳುನಾಡು ತಲಾ 8, ಕರ್ನಾಟಕ ಮತ್ತು ಉತ್ತರಾಖಂಡ ತಲಾ 3 ರಂತೆ ಕೇರಳ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಎರಡು ಆನೆ ಹತ್ಯೆಯ ಪ್ರಕರಣಗಳನ್ನು ದಾಖಲಿಸಿದರೆ, ರಾಜಸ್ಥಾನ, ಹಿಮಾಚಲ ಪ್ರದೇಶ, ಬಿಹಾರ, ಮೇಘಾಲಯ, ಛತ್ತಿಸ್‌ಗಢ, ಮಹಾರಾಷ್ಟ್ರ ತಲಾ ಒಂದು ಆನೆ ಹತ್ಯೆಗೊಳಗಾಗಿದೆ ಎಂದು ವರದಿ ತಿಳಿಸಿದೆ.
ಆನೆಗಳನ್ನು ಹತ್ಯೆಯನ್ನು ಮಾಡಿದ ಪ್ರಕರಣದಲ್ಲಿ ತಮಿಳುನಾಡಿನಲ್ಲಿ ಗರಿಷ್ಠ 17 ಜನರನ್ನು ಬಂಧಿಸಲಾಗಿದ್ದು, ಅಸ್ಸಾಂನಲ್ಲಿ 15, ಒಡಿಶಾದಲ್ಲಿ 13 ಹಾಗೂ ಪಶ್ಚಿಮ ಬಂಗಾಳದಲ್ಲಿ 11 ಜನರನ್ನು ಬಂಧಿಸಲಾಗಿದೆ. ಮಾತ್ರವಲ್ಲದೆ, ಕೇರಳದಲ್ಲಿ ಐವರು ಉತ್ತರಾಖಂಡ ಮತ್ತು ಬಿಹಾರದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…