ಕಡಬ ತಾಲೂಕು ಸೇರಿದಂತೆ ಅರಣ್ಯದ ಅಂಚಿನ ಪ್ರದೇಶದಲ್ಲಿ ಆಗಾಗ ಕಾಡಾನೆಗಳ ಕಾಟ ಹೆಚ್ಚಾಗಿದೆ. ಇದೀಗ ಕಡಬ ತಾಲೂಕಿನ ಇಚ್ಲಂಪಾಡಿಯ ನಡುಮನೆ ಕ್ರಾಸ್ ಬಳಿ ಕಾಡಾನೆ ದಾಳಿ ನಡೆಸಿದೆ. ಈ ಸಂದರ್ಭ ವಿಜುಕುಮಾರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡ ವಿಜುಕುಮಾರ್ ಅವರನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿಗೆ ಕರೆದೊಯ್ಯಲಾಗಿದೆ .
ಕಳೆದ ಕೆಲವು ಸಮಯಗಳಿಂದ ಕಾಡಾನೆಗಳ ಕಾಟ ಹಲವು ಕಡೆಗಳಲ್ಲಿ ಕಂಡುಬಂದಿದೆ. ಸುಳ್ಯ ತಾಲೂಕಿನ ಮಂಡೆಕೋಲು ಸೇರಿದಂತೆ ಕಲ್ಮಕಾರು, ಬಾಳುಗೋಡು, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ಹಾನಿಯೂ ಸಂಭವಿಸಿದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…