ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

March 14, 2026
7:01 AM
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ ತಡೆಗಟ್ಟಲು ವಿಫಲವಾಗಿದೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರೆದಿದ್ದು, ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕರೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಹೈಸ್ಕೂಲ್ ಪೈಸಾರಿ ಸಮೀಪ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನು ಕಾಫಿ ತೋಟದ ಮಾಲೀಕ ಗಣಪತಿ ಎಂದು ಗುರುತಿಸಲಾಗಿದೆ. ಅವರು ತಮ್ಮ ಕಾಫಿ ತೋಟದ ವೀಕ್ಷಣೆಗೆ ತೆರಳಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೇವಲ ಮೂರು ದಿನಗಳ ಅಂತರದಲ್ಲಿ ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ ವೇಳೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

A coffee estate owner named Ganapathi was killed in a wild elephant attack near Siddapura in Virajpet taluk of Kodagu district. With two deaths reported within three days due to elephant attacks, local residents staged protests accusing the forest department of failing to control human-elephant conflict.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror