ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರೆದಿದ್ದು, ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕರೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಹೈಸ್ಕೂಲ್ ಪೈಸಾರಿ ಸಮೀಪ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ಕಾಫಿ ತೋಟದ ಮಾಲೀಕ ಗಣಪತಿ ಎಂದು ಗುರುತಿಸಲಾಗಿದೆ. ಅವರು ತಮ್ಮ ಕಾಫಿ ತೋಟದ ವೀಕ್ಷಣೆಗೆ ತೆರಳಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕೇವಲ ಮೂರು ದಿನಗಳ ಅಂತರದಲ್ಲಿ ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ ವೇಳೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
A coffee estate owner named Ganapathi was killed in a wild elephant attack near Siddapura in Virajpet taluk of Kodagu district. With two deaths reported within three days due to elephant attacks, local residents staged protests accusing the forest department of failing to control human-elephant conflict.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…