ರಾಜ್ಯದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ ಹಾಗೂ ಮಾನವ–ಆನೆ ಸಂಘರ್ಷವನ್ನು ನಿಯಂತ್ರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆಗೆ ಆದೇಶ ಹೊರಡಿಸಿದೆ. ಈ ಕುರಿತು ಕರ್ನಾಟಕ ಸರ್ಕಾರದ ಅಧಿಸೂಚನೆ ಮೂಲಕ ಅಧಿಕೃತ ಆದೇಶ ಹೊರಡಿಸಲಾಗಿದೆ.
ಅರಣ್ಯ ಪ್ರದೇಶಗಳಲ್ಲಿ ಕಾಡಾನೆಗಳ ಚಲನೆ ಹೆಚ್ಚುತ್ತಿರುವ ಹಿನ್ನೆಲೆ, ಗ್ರಾಮ ಪ್ರದೇಶಗಳಲ್ಲಿ ಬೆಳೆ ನಷ್ಟ ಹಾಗೂ ಮಾನವ ಜೀವ ಹಾನಿ ಸಂಭವಿಸುವ ಪ್ರಕರಣಗಳನ್ನು ನಿಯಂತ್ರಿಸಲು ವಿಶೇಷ ತಂಡವನ್ನು ರಚಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತಂಡದಲ್ಲಿ ಯಾರು ಇರ್ತಾರೆ? : ಅಧಿಸೂಚನೆಯ ಪ್ರಕಾರ ಒಟ್ಟು 28 ಸಿಬ್ಬಂದಿಯನ್ನು ಒಳಗೊಂಡ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ತಂಡದಲ್ಲಿ ಮುಖ್ಯವಾಗಿ:
-
ಉಪ ಅರಣ್ಯ ಸಂರಕ್ಷಣಾಧಿಕಾರಿ – 1
-
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ – 2
-
ವಾಚರ್ / ಬೀಟ್ ಸಿಬ್ಬಂದಿ – 25
ಒಟ್ಟು 28 ಸಿಬ್ಬಂದಿ ಈ ವಿಶೇಷ ತಂಡದಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ತಂಡದ ಪ್ರಮುಖ ಕೆಲಸಗಳು : ಎಲಿಫೆಂಟ್ ಟಾಸ್ಕ್ ಫೋರ್ಸ್ ತಂಡಕ್ಕೆ ಹಲವು ಜವಾಬ್ದಾರಿಗಳನ್ನು ನೀಡಲಾಗಿದೆ. ಅವುಗಳಲ್ಲಿ ಪ್ರಮುಖವಾದವು:
-
ಕಾಡಾನೆಗಳ ಚಲನವಲನವನ್ನು ನಿರಂತರವಾಗಿ ಗಮನಿಸುವುದು
-
ಗ್ರಾಮ ಪ್ರದೇಶಗಳಿಗೆ ಕಾಡಾನೆಗಳು ಪ್ರವೇಶಿಸುವುದನ್ನು ತಡೆಯುವ ಕ್ರಮ
-
ಮಾನವ–ಆನೆ ಸಂಘರ್ಷ ಹೆಚ್ಚಿರುವ ಪ್ರದೇಶಗಳಲ್ಲಿ ತಕ್ಷಣದ ಕಾರ್ಯಾಚರಣೆ
-
ಅಗತ್ಯವಿದ್ದರೆ ಕಂಟ್ರೋಲ್ ರೂಮ್ ಮೂಲಕ ಸಮನ್ವಯ ಸಾಧಿಸುವುದು
-
ಸ್ಥಳೀಯ ಜನರಿಗೆ ಎಚ್ಚರಿಕೆ ಹಾಗೂ ಮಾಹಿತಿ ನೀಡುವುದು
ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಸ್ಥಳೀಯ ಆಡಳಿತದೊಂದಿಗೆ ಸಮನ್ವಯದಿಂದ ಈ ತಂಡ ಕಾರ್ಯನಿರ್ವಹಿಸಲಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.
The Karnataka government has constituted a 28-member Elephant Task Force to monitor elephant movement and reduce human-elephant conflict in forest fringe areas. The team will coordinate with forest officials and local administration to manage elephant-related incidents.

