Advertisement
MIRROR FOCUS

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

Share

ರಾಜ್ಯದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ ಹಾಗೂ ಮಾನವ–ಆನೆ ಸಂಘರ್ಷವನ್ನು ನಿಯಂತ್ರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆಗೆ ಆದೇಶ ಹೊರಡಿಸಿದೆ. ಈ ಕುರಿತು ಕರ್ನಾಟಕ ಸರ್ಕಾರದ ಅಧಿಸೂಚನೆ ಮೂಲಕ ಅಧಿಕೃತ ಆದೇಶ ಹೊರಡಿಸಲಾಗಿದೆ.

ಅರಣ್ಯ ಪ್ರದೇಶಗಳಲ್ಲಿ ಕಾಡಾನೆಗಳ ಚಲನೆ ಹೆಚ್ಚುತ್ತಿರುವ ಹಿನ್ನೆಲೆ, ಗ್ರಾಮ ಪ್ರದೇಶಗಳಲ್ಲಿ ಬೆಳೆ ನಷ್ಟ ಹಾಗೂ ಮಾನವ ಜೀವ ಹಾನಿ ಸಂಭವಿಸುವ ಪ್ರಕರಣಗಳನ್ನು ನಿಯಂತ್ರಿಸಲು ವಿಶೇಷ ತಂಡವನ್ನು ರಚಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತಂಡದಲ್ಲಿ ಯಾರು ಇರ್ತಾರೆ? :  ಅಧಿಸೂಚನೆಯ ಪ್ರಕಾರ ಒಟ್ಟು 28 ಸಿಬ್ಬಂದಿಯನ್ನು ಒಳಗೊಂಡ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚಿಸಲಾಗಿದೆ.  ತಂಡದಲ್ಲಿ ಮುಖ್ಯವಾಗಿ:

  • ಉಪ ಅರಣ್ಯ ಸಂರಕ್ಷಣಾಧಿಕಾರಿ – 1

  • ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ – 2

  • ವಾಚರ್ / ಬೀಟ್ ಸಿಬ್ಬಂದಿ – 25

ಒಟ್ಟು 28 ಸಿಬ್ಬಂದಿ ಈ ವಿಶೇಷ ತಂಡದಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ತಂಡದ ಪ್ರಮುಖ ಕೆಲಸಗಳು : ಎಲಿಫೆಂಟ್ ಟಾಸ್ಕ್ ಫೋರ್ಸ್ ತಂಡಕ್ಕೆ ಹಲವು ಜವಾಬ್ದಾರಿಗಳನ್ನು ನೀಡಲಾಗಿದೆ. ಅವುಗಳಲ್ಲಿ ಪ್ರಮುಖವಾದವು:

  • ಕಾಡಾನೆಗಳ ಚಲನವಲನವನ್ನು ನಿರಂತರವಾಗಿ ಗಮನಿಸುವುದು

  • ಗ್ರಾಮ ಪ್ರದೇಶಗಳಿಗೆ ಕಾಡಾನೆಗಳು ಪ್ರವೇಶಿಸುವುದನ್ನು ತಡೆಯುವ ಕ್ರಮ

  • ಮಾನವ–ಆನೆ ಸಂಘರ್ಷ ಹೆಚ್ಚಿರುವ ಪ್ರದೇಶಗಳಲ್ಲಿ ತಕ್ಷಣದ ಕಾರ್ಯಾಚರಣೆ

  • ಅಗತ್ಯವಿದ್ದರೆ ಕಂಟ್ರೋಲ್ ರೂಮ್ ಮೂಲಕ ಸಮನ್ವಯ ಸಾಧಿಸುವುದು

  • ಸ್ಥಳೀಯ ಜನರಿಗೆ ಎಚ್ಚರಿಕೆ ಹಾಗೂ ಮಾಹಿತಿ ನೀಡುವುದು

ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಸ್ಥಳೀಯ ಆಡಳಿತದೊಂದಿಗೆ ಸಮನ್ವಯದಿಂದ ಈ ತಂಡ ಕಾರ್ಯನಿರ್ವಹಿಸಲಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

The Karnataka government has constituted a 28-member Elephant Task Force to monitor elephant movement and reduce human-elephant conflict in forest fringe areas. The team will coordinate with forest officials and local administration to manage elephant-related incidents.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

1 hour ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

2 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

10 hours ago

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

12 hours ago

ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ

ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…

12 hours ago

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…

13 hours ago