ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಕಾಡಾನೆಗಳು ದಾಂಧಲೆ ನಡೆಸಿವೆ. ಅಣೆಕಟ್ಟೆಯ ಹಿನ್ನೀರಿನ ಪ್ರದೇಶವಾದ ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ಸಂಗಮದ ಸಮೀಪ ರೈತರ ಜಮೀನಿನಲ್ಲಿ ಬೆಳೆ ಹಾನಿಗೊಳಿಸಿವೆ. ರೈತರು ಬೆಳೆದ ಅಡಿಕೆ, ತೆಂಗು, ಬಾಳೆ, ಭತ್ತ ಸೇರಿದಂತೆ ಬೆಳೆಗಳನ್ನು ಧ್ವಂಸ ಮಾಡಿವೆ. ಜೋಡಿ ಆನೆಗಳ ದಾಂದಲೆಗೆ ರೈತರು ಕಂಗಾಲಾಗಿದ್ದಾರೆ. ಕಳೆದ ಎರಡು ದಿನಗಳಿಂದ ಆನೆಗಳನ್ನು ಕಾಡಿಗಟ್ಟಲು ಮಳೆಯ ನಡುವೆ ಅರಣ್ಯ ಅಧಿಕಾರಿಗಳು ಹರಸಾಹಸಪಡುತ್ತಿದ್ದಾರೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…