ಕೈಗೆಟುಕುವ ಬೆಲೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌

May 26, 2023
5:00 PM

ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಭಾರೀ ಜನಪ್ರಿಯತೆಗಳಿಸುತ್ತಿವೆ. ತಿಂಗಳಿಗೆ ಕನಿಷ್ಠವೆಂದರೂ ಎರಡರಿಂದ ಮೂರು ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆಯಾಗುತ್ತವೆ. ಇದೀಗ, ಎನಿಗ್ಮಾ (Enigma) ದೇಶೀಯ ಮಾರುಕಟ್ಟೆಯಲ್ಲಿ ತನ್ನ ಎರಡು ಹೈ-ಸ್ವೀಡ್ ಸ್ಕೂಟರ್‌ಗಳನ್ನು ಲಾಂಚ್ ಮಾಡಿದೆ.
ಎನಿಗ್ಮಾ, ಜಿಟಿ 450 ಪ್ರೊ ಮತ್ತು ಕ್ರಿಂಕ್ ವಿ1 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆ ಮಾಡಿದೆ. ಇವೆರೆಡು ಕ್ರಮವಾಗಿ ರೂ.89,000 ಮತ್ತು ರೂ.94,000 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿವೆ. ಆಸಕ್ತ ಗ್ರಾಹಕರು, ಎನಿಗ್ಮಾ ಶೋರೂಂಗೆ ಭೇಟಿ ನೀಡುವ ಮೂಲಕ ಖರೀದಿ ಮಾಡಬಹುದು. ಕಂಪನಿಯು ಈಗಾಗಲೇ ತನ್ನ ವೆಬ್‌ಸೈಟ್‌ನಲ್ಲಿಯೇ ಆನ್‌ಲೈನ್ ಆರ್ಡರ್ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ.
ಎನಿಗ್ಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಅನ್ಮೋಲ್ ಬೋಹ್ರೆ, ‘ಜಿಟಿ 450 ಪ್ರೊ ಮತ್ತು ಕ್ರಿಂಕ್ ವಿ1 ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಗಳಿಸುತ್ತಿರುವುದು ಸಂತೋಷ ತಂದಿದೆ. ಅದರಲ್ಲಿ ಕ್ರಿಂಕ್ ವಿ1 ಸ್ಕೂಟರ್ ರೆಟ್ರೋ ಲುಕ್ ಹೊಂದಿದ್ದು, ಹೆಚ್ಚಿನ ಯುವ ಖರೀದಿದಾರರಿಗೆ ಇಷ್ಟವಾಗುತ್ತದೆ ಎಂಬ ನಂಬಿಕೆ ಹೊಂದಿದ್ದೇವೆ’ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ
March 10, 2026
11:25 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ
March 10, 2026
10:42 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror