ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಭಾರೀ ಜನಪ್ರಿಯತೆಗಳಿಸುತ್ತಿವೆ. ತಿಂಗಳಿಗೆ ಕನಿಷ್ಠವೆಂದರೂ ಎರಡರಿಂದ ಮೂರು ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆಯಾಗುತ್ತವೆ. ಇದೀಗ, ಎನಿಗ್ಮಾ (Enigma) ದೇಶೀಯ ಮಾರುಕಟ್ಟೆಯಲ್ಲಿ ತನ್ನ ಎರಡು ಹೈ-ಸ್ವೀಡ್ ಸ್ಕೂಟರ್‌ಗಳನ್ನು ಲಾಂಚ್ ಮಾಡಿದೆ.
ಎನಿಗ್ಮಾ, ಜಿಟಿ 450 ಪ್ರೊ ಮತ್ತು ಕ್ರಿಂಕ್ ವಿ1 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆ ಮಾಡಿದೆ. ಇವೆರೆಡು ಕ್ರಮವಾಗಿ ರೂ.89,000 ಮತ್ತು ರೂ.94,000 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿವೆ. ಆಸಕ್ತ ಗ್ರಾಹಕರು, ಎನಿಗ್ಮಾ ಶೋರೂಂಗೆ ಭೇಟಿ ನೀಡುವ ಮೂಲಕ ಖರೀದಿ ಮಾಡಬಹುದು. ಕಂಪನಿಯು ಈಗಾಗಲೇ ತನ್ನ ವೆಬ್‌ಸೈಟ್‌ನಲ್ಲಿಯೇ ಆನ್‌ಲೈನ್ ಆರ್ಡರ್ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ.
ಎನಿಗ್ಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಅನ್ಮೋಲ್ ಬೋಹ್ರೆ, ‘ಜಿಟಿ 450 ಪ್ರೊ ಮತ್ತು ಕ್ರಿಂಕ್ ವಿ1 ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಗಳಿಸುತ್ತಿರುವುದು ಸಂತೋಷ ತಂದಿದೆ. ಅದರಲ್ಲಿ ಕ್ರಿಂಕ್ ವಿ1 ಸ್ಕೂಟರ್ ರೆಟ್ರೋ ಲುಕ್ ಹೊಂದಿದ್ದು, ಹೆಚ್ಚಿನ ಯುವ ಖರೀದಿದಾರರಿಗೆ ಇಷ್ಟವಾಗುತ್ತದೆ ಎಂಬ ನಂಬಿಕೆ ಹೊಂದಿದ್ದೇವೆ’ ಎಂದು ಹೇಳಿದ್ದಾರೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…