2025-26 ರ ಹಿಂಗಾರಿನಲ್ಲಿ ಆಹಾರಧಾನ್ಯ ಉತ್ಪಾದನೆಗೆ ಒತ್ತು | ಕೃಷಿ, ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್

September 16, 2025
9:24 PM

2025-26ರ ಹಿಂಗಾರು   ಋತುವಿನಲ್ಲಿ ಆಹಾರ ಧಾನ್ಯ ಉತ್ಪಾದನೆಗೆ ರಾಷ್ಟ್ರೀಯ ಗುರಿಯನ್ನು 362.50 ಮಿಲಿಯನ್ ಟನ್‌ಗಳಿಗೆ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್   ದೆಹಲಿಯಲ್ಲಿ ಹೇಳಿದ್ದಾರೆ.   ಕಳೆದ ವರ್ಷದ  ಆಹಾರ ಧಾನ್ಯ ಉತ್ಪಾದನೆಗಿಂತ ಈ ಬಾರಿಯ ಉತ್ಪಾದನೆ ಶೇಕಡಾ 2.4 ರಷ್ಟು ಹೆಚ್ಚಾಗಿದೆ.  2025-26ರ ಮೊದಲ ತ್ರೈಮಾಸಿಕದಲ್ಲಿ ಭಾರತದ ಕೃಷಿ ವಲಯವು ಶೇಕಡಾ 3.7 ರಷ್ಟು ಬೆಳವಣಿಗೆ ದರವನ್ನು ದಾಖಲಿಸಿದ್ದು, ಇದು ಜಾಗತಿಕವಾಗಿ ಅಧಿಕವಾಗಿದೆ.  ದೇಶದ ಅವಶ್ಯಕತೆಗಳನ್ನು ಪೂರೈಸಲು ಸಾಕಷ್ಟು ಬೀಜ ದಾಸ್ತಾನು ಲಭ್ಯವಿದೆ ಎಂದು ತಿಳಿಸಿದರು.  ನಕಲಿ ರಸಗೊಬ್ಬರಗಳು, ಬೀಜಗಳು ಮತ್ತು ಕೀಟನಾಶಕಗಳ ಹಾವಳಿ ಹೆಚ್ಚಾಗಿದ್ದು, ಇಂತಹ ತಯಾರಕರು ಮತ್ತು ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು .  ಹೆಚ್ಚುತ್ತಿರುವ ಅನಿರೀಕ್ಷಿತ ಹವಾಮಾನ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ರೈತರು ಬೆಳೆ ವಿಮೆಯನ್ನು ಆರಿಸಿಕೊಳ್ಳುವಂತೆ ಇದಾಗಲೇ ರೈತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror