ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಪ್ತು ನಿಗಮದ ವತಿಯಿಂದ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ರೈತರನ್ನು ಉದ್ಯಮಿಗಳಾಗಿ ಸ್ವಾವಲಂಬಿಗೊಳಿಸಲು, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ವಿಸ್ತರಣೆಗೆ ಅನುಕೂಲವಾಗಲು ಯೋಜನೆ ಸಹಕಾರಿಯಾಗಿದೆ.
ಕೃಷಿ ಸಮಾಜದ ಜಿಲ್ಲಾಧ್ಯಕ್ಷ ವೀರ ಗೋಪಾಲ್, ಕಾರ್ಯಾಗಾರದ ಮೂಲಕ ರೈತರಿಗೆ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ಕೃಷಿ ಸೌಲಭ್ಯಗಳ ಕುರಿತು ಉಪಯುಕ್ತ ಮಾಹಿತಿ ನೀಡಲಾಯಿತು ಎಂದರು. ಕಾರ್ಯಾಗಾರದ ಮೂಲಕ 500 ಜನ ರೈತರಿಗೆ ಯೋಜನೆಯ ಕುರಿತು ಅರಿವು ಮೂಡಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು, ಜಂಟಿ ಕೃಷಿ ನಿರ್ದೇಶಕರಾದ ಅಂಬಿಕಾ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ನಟರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ರೈತರು ಕೃಷಿ ಉತ್ಪನ್ನಗಳನ್ನು ವಿನೂತನವಾಗಿ ಬಳಕೆ ಮಾಡಿಕೊಂಡು ರೈತ ಉದ್ಯಮಿಗಳಾಗಿ ಹೊರಹೊಮ್ಮಲು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆ ಸಹಕಾರಿಯಾಗಲಿದೆ ಎಂದು ರೈತ ಮುಖಂಡ ಸಿ. ಪುಟ್ಟಸ್ವಾಮಿ ತಿಳಿಸಿದರು.
ಅಡಿಕೆ ಎಲೆಚುಕ್ಕಿ ರೋಗ ವ್ಯಾಪಕವಾಗಿದೆ. ಮಲೆನಾಡು ತಪ್ಪಲು ಭಾಗಗಳಲ್ಲಿ ಅಡಿಕೆ ಎಲೆಚುಕ್ಕಿ ರೋಗ…
ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…
ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…
ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…
ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…
ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…