ಕೇಂದ್ರ ಸರ್ಕಾರ ದ್ವಿದಳ ಧಾನ್ಯಗಳನ್ನು ಬೆಳೆಯಲು ಉತ್ತೇಜನ ನೀಡುತ್ತಿದ್ದು, ಆಹಾರ ಭದ್ರತೆ ಮತ್ತು ರಾಷ್ಟ್ರೀಯ ಖಾದ್ಯ ಅಭಿಯಾನದಡಿ ಇಳುವರಿ ಹೆಚ್ಚಳಕ್ಕೆ ಆದ್ಯತೆ ನೀಡಿದೆ.
ಪ್ರಸಕ್ತ ಹಂಗಾಮಿನಲ್ಲಿ ರಾಯಚೂರು ಜಿಲ್ಲೆಯಲ್ಲಿ ರೈತರು ದ್ವಿದಳ ಧಾನ್ಯಗಳನ್ನು ಹೆಚ್ಚಾಗಿ ಬೆಳೆದಿದ್ದಾರೆ. ಪ್ರಸಕ್ತ ವರ್ಷ ಬಹುತೇಕ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ರೈತ ಬೂದಯ್ಯ, ತೊಗರಿ, ಹೆಸರು, ಹತ್ತಿಯಂತಹ ದ್ವಿದಳಧಾನ್ಯಗಳ ಮುಂಗಾರು ಬೆಳೆಯು ಈ ಬಾರಿ ಉತ್ತಮ ಇಳುವರಿ ನೀಡುವ ನಿರೀಕ್ಷೆ ಇದೆ. ಹಿಂಗಾರಿನಲ್ಲಿ ಜೋಳ, ಕಡಲೆ ಬೆಳೆಯುತ್ತಿದ್ದು ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಲಾಗಿದೆ ಎಂದರು.
ರಾಯಚೂರು ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಪ್ರಕಾಶ್, ದೇವದುರ್ಗದಲ್ಲಿ ಶೇಕಡ 18 ರಷ್ಟು, ಮಾನ್ವಿಯಲ್ಲಿ ಶೇಕಡ 14 ರಷ್ಟು ಮಳೆ ಕೊರತೆ ಹೊರತುಪಡಿಸಿದರೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಖುಷ್ಕಿ ಭೂಮಿಯಲ್ಲಿ ಶೇಕಡ 90 ರಷ್ಟು ಬಿತ್ತನೆ ಗುರಿ ಸಾಧಿಸಲಾಗಿದೆ. ಮುಂಗಾರು ಬೆಳೆ ತೊಗರಿ, ಹಿಂಗಾರು ಬೆಳೆ ಕಡಲೆಯ ಇಳುವರಿ ಹೆಚ್ಚಳಕ್ಕೆ ಪ್ರಾತ್ಯಕ್ಷಿಕೆಗಳ ಮೂಲಕ ಅರಿವು ಮೂಡಿಸಲಾಗಿದೆ. ಕ್ಷೇತ್ರಮಟ್ಟದಲ್ಲಿ ಮಣ್ಣಿನ ಫಲವತ್ತತೆ ಸ್ಥಿರಗೊಳಿಸುವುದು ಯೋಜನೆಯ ಉದ್ದೇಶವಾಗಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…