ರಾಜ್ಯದಲ್ಲಿ 13,644 ಕೆರೆಗಳ ಒತ್ತುವರಿ | ಈ ಪೈಕಿ 7,986 ಕೆರೆಗಳ ಒತ್ತುವರಿ ತೆರವು

August 21, 2025
10:01 PM

ರಾಜ್ಯದಲ್ಲಿ 13 ಸಾವಿರದ 644 ಕೆರೆಗಳು ಒತ್ತುವರಿಯಾಗಿದ್ದು, ಈ ಪೈಕಿ 7 ಸಾವಿರದ 986 ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.

ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿರುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಮಂಡಿಸಿ ಮಾಹಿತಿ ನೀಡಿದ ಅವರು, 5 600 ಕೆರೆಗಳ ಒತ್ತುವರಿ ತೆರವು ಮಾಡುವುದು ಬಾಕಿ ಇದೆ. ಕೆರೆಗಳ ಸಂರಕ್ಷಣೆ ಅಭಿವೃದ್ಧಿಗೆ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ. ಪ್ರತಿಯೊಂದು ಗ್ರಾಮಗಳಲ್ಲಿರುವ ಕೆರೆಗಳ ಸಂರಕ್ಷಣೆಗೆ ಸಮಿತಿ ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧ್ಯಕ್ಷರು ಸಮಿತಿಯ ಅಧ್ಯಕ್ಷರಾಗಿರಲಿದ್ದಾರೆ. ಕೆರೆ ಸಂರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದರು.

ಈ ವೇಳೆ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು, ಜನಸಂಖ್ಯೆಗೆ ಅನುಗುಣವಾಗಿ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿಲ್ಲ. ಕೆರೆ ಸಂರಕ್ಷಣೆ ಕಾಯ್ದೆಗೆ ತಿದ್ದುಪಡಿಯಿಂದ ಬಫರ್ ವಲಯದ ಗಾತ್ರ ಕಡಿಮೆಯಾಗುವುದರಿಂದ ಕೆರೆಗಳ ನಾಶವಾಗುವ ಸಾಧ್ಯತೆ ಇದೆ. ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆಗಳಿವೆ. ರಾಜಕಾಲುವೆ ತೆರವು ವಿಚಾರದಲ್ಲಿ ಸರ್ಕಾರ ವಿಫಲವಾಗಿವೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ, ನಮ್ಮ X ಖಾತೆಯನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ… 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ
March 15, 2026
11:39 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror