ರಾಜ್ಯದಲ್ಲಿ 13 ಸಾವಿರದ 644 ಕೆರೆಗಳು ಒತ್ತುವರಿಯಾಗಿದ್ದು, ಈ ಪೈಕಿ 7 ಸಾವಿರದ 986 ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿರುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಮಂಡಿಸಿ ಮಾಹಿತಿ ನೀಡಿದ ಅವರು, 5 600 ಕೆರೆಗಳ ಒತ್ತುವರಿ ತೆರವು ಮಾಡುವುದು ಬಾಕಿ ಇದೆ. ಕೆರೆಗಳ ಸಂರಕ್ಷಣೆ ಅಭಿವೃದ್ಧಿಗೆ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ. ಪ್ರತಿಯೊಂದು ಗ್ರಾಮಗಳಲ್ಲಿರುವ ಕೆರೆಗಳ ಸಂರಕ್ಷಣೆಗೆ ಸಮಿತಿ ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧ್ಯಕ್ಷರು ಸಮಿತಿಯ ಅಧ್ಯಕ್ಷರಾಗಿರಲಿದ್ದಾರೆ. ಕೆರೆ ಸಂರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದರು.
ಈ ವೇಳೆ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು, ಜನಸಂಖ್ಯೆಗೆ ಅನುಗುಣವಾಗಿ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿಲ್ಲ. ಕೆರೆ ಸಂರಕ್ಷಣೆ ಕಾಯ್ದೆಗೆ ತಿದ್ದುಪಡಿಯಿಂದ ಬಫರ್ ವಲಯದ ಗಾತ್ರ ಕಡಿಮೆಯಾಗುವುದರಿಂದ ಕೆರೆಗಳ ನಾಶವಾಗುವ ಸಾಧ್ಯತೆ ಇದೆ. ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆಗಳಿವೆ. ರಾಜಕಾಲುವೆ ತೆರವು ವಿಚಾರದಲ್ಲಿ ಸರ್ಕಾರ ವಿಫಲವಾಗಿವೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ, ನಮ್ಮ X ಖಾತೆಯನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…