ಸರ್ಕಾರದ ಗೋಮಾಳ ಒತ್ತುವರಿ | ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

May 24, 2024
10:14 PM
ಸರ್ಕಾರಿ ಗೋಮಳ ಒತ್ತುವರಿಯನ್ನು ತೆರವುಗೊಳಿಸಬೇಕು ಹಾಗೂ ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಜರಾ ಹೊಸಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಸುಮಾರು 35 ಎಕರೆ ಗೋಮಾಳ ಜಮೀನು ಒತ್ತುವರಿ ಮಾಡಿದ್ದು, ಅದನ್ನು ತೆರವುಗೊಳಿಸಲು ಆದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ  ರಾಜ್ಯ ಸರ್ಕಾರಕ್ಕೆ ಗುರುವಾರ ಕರ್ನಾಟಕ ಹೈಕೋರ್ಟ್‌ ನೋಟಿಸ್ ಜಾರಿಗೊಳಿಸಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಮನ್ವಯಕಾರ ರಾಮು ನೇರಳಘಟ್ಟ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಸ್ ಆರ್ ಕೃಷ್ಣ ಕುಮಾರ್ ಮತ್ತು ರಾಮಚಂದ್ರ ಹುದ್ದಾರ್‌ ಅವರ ನೇತೃತ್ವದ ರಜಾಕಾಲೀನ ವಿಭಾಗೀಯ ಪೀಠ ನಡೆಸಿತು.

ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ, ದೊಡ್ಡಬಳ್ಳಾಪುರ ಪಟ್ಟಣದ ಉಪ ವಿಭಾಗಾಧಿಕಾರಿ, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್‌ಗೆ ಪೀಠವು ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದೆ.

ಪ್ರಕರಣದಲ್ಲಿ ನಡೆದಿರುವ ಸರ್ಕಾರಿ ಜಮೀನಿನ ಒತ್ತುವರಿಯನ್ನು ತೆರವುಗೊಳಿಸುವ ಮೂಲಕ ಸರ್ಕಾರದ ಜಮೀನು ರಕ್ಷಣೆ ಮಾಡಬೇಕು ಮತ್ತು ಒತ್ತುವರಿದಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.

ರಾಜ್ಯದ ಹಲವು ಕಡೆ ಗೋಮಳ ಒತ್ತುವರಿ ಹಾಗೂ ಅನ್ಯ ಉದ್ದೇಶಗಳಿಗೆ ಬಳಕೆಯಾಗುತ್ತಿರುವುದರ ಬಗ್ಗೆಯೂ ಸಂಘಟನೆಗಳು ಗಮನ ಸೆಳೆದಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ
ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?
September 29, 2026
12:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror