ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಜರಾ ಹೊಸಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಸುಮಾರು 35 ಎಕರೆ ಗೋಮಾಳ ಜಮೀನು ಒತ್ತುವರಿ ಮಾಡಿದ್ದು, ಅದನ್ನು ತೆರವುಗೊಳಿಸಲು ಆದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಗುರುವಾರ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಮನ್ವಯಕಾರ ರಾಮು ನೇರಳಘಟ್ಟ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಸ್ ಆರ್ ಕೃಷ್ಣ ಕುಮಾರ್ ಮತ್ತು ರಾಮಚಂದ್ರ ಹುದ್ದಾರ್ ಅವರ ನೇತೃತ್ವದ ರಜಾಕಾಲೀನ ವಿಭಾಗೀಯ ಪೀಠ ನಡೆಸಿತು.
ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ, ದೊಡ್ಡಬಳ್ಳಾಪುರ ಪಟ್ಟಣದ ಉಪ ವಿಭಾಗಾಧಿಕಾರಿ, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್‌ಗೆ ಪೀಠವು ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ.
ಪ್ರಕರಣದಲ್ಲಿ ನಡೆದಿರುವ ಸರ್ಕಾರಿ ಜಮೀನಿನ ಒತ್ತುವರಿಯನ್ನು ತೆರವುಗೊಳಿಸುವ ಮೂಲಕ ಸರ್ಕಾರದ ಜಮೀನು ರಕ್ಷಣೆ ಮಾಡಬೇಕು ಮತ್ತು ಒತ್ತುವರಿದಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.
ರಾಜ್ಯದ ಹಲವು ಕಡೆ ಗೋಮಳ ಒತ್ತುವರಿ ಹಾಗೂ ಅನ್ಯ ಉದ್ದೇಶಗಳಿಗೆ ಬಳಕೆಯಾಗುತ್ತಿರುವುದರ ಬಗ್ಗೆಯೂ ಸಂಘಟನೆಗಳು ಗಮನ ಸೆಳೆದಿವೆ.
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…
ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ ಮೂರು ದಿನಗಳ…
ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…