ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಜರಾ ಹೊಸಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಸುಮಾರು 35 ಎಕರೆ ಗೋಮಾಳ ಜಮೀನು ಒತ್ತುವರಿ ಮಾಡಿದ್ದು, ಅದನ್ನು ತೆರವುಗೊಳಿಸಲು ಆದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಗುರುವಾರ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಮನ್ವಯಕಾರ ರಾಮು ನೇರಳಘಟ್ಟ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಸ್ ಆರ್ ಕೃಷ್ಣ ಕುಮಾರ್ ಮತ್ತು ರಾಮಚಂದ್ರ ಹುದ್ದಾರ್ ಅವರ ನೇತೃತ್ವದ ರಜಾಕಾಲೀನ ವಿಭಾಗೀಯ ಪೀಠ ನಡೆಸಿತು.
ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ, ದೊಡ್ಡಬಳ್ಳಾಪುರ ಪಟ್ಟಣದ ಉಪ ವಿಭಾಗಾಧಿಕಾರಿ, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್‌ಗೆ ಪೀಠವು ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ.
ಪ್ರಕರಣದಲ್ಲಿ ನಡೆದಿರುವ ಸರ್ಕಾರಿ ಜಮೀನಿನ ಒತ್ತುವರಿಯನ್ನು ತೆರವುಗೊಳಿಸುವ ಮೂಲಕ ಸರ್ಕಾರದ ಜಮೀನು ರಕ್ಷಣೆ ಮಾಡಬೇಕು ಮತ್ತು ಒತ್ತುವರಿದಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.
ರಾಜ್ಯದ ಹಲವು ಕಡೆ ಗೋಮಳ ಒತ್ತುವರಿ ಹಾಗೂ ಅನ್ಯ ಉದ್ದೇಶಗಳಿಗೆ ಬಳಕೆಯಾಗುತ್ತಿರುವುದರ ಬಗ್ಗೆಯೂ ಸಂಘಟನೆಗಳು ಗಮನ ಸೆಳೆದಿವೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…