ದ ಕ ಜಿಲ್ಲೆಯಲ್ಲಿ 364 ಎಂಡೋಸಲ್ಫಾನ್ ಪೀಡಿತರು | 6314 ಜನರಿಗೆ ವಿವಿಧ ಆರೋಗ್ಯ ಸಮಸ್ಯೆ | ಎಂಡೋ ಸಂತ್ರಸ್ತರ ಸಮಸ್ಯೆ ಸ್ಥಳೀಯವಾಗಿ ಪರಿಹರಿಸಲು ಡಿಸಿ ಸೂಚನೆ |

November 24, 2023
10:41 PM
ಎಂಡೋ ಸಂತ್ರಸ್ತರ ಕಡೆಗೆ ವಿಶೇಷ ಕಾಳಜಿ ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಎಂಡೋಸಲ್ಫಾನ್ ಸಂತ್ರಸ್ತರ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ.

Advertisement
Advertisement
Advertisement

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಯಾ ಆರೋಗ್ಯ ಕೇಂದ್ರ ಮಟ್ಟದಲ್ಲಿ ಎಂಡೋ ಸಂತ್ರಸ್ತರು, ಅವರ ಪೋಷಕರು, ವೈದ್ಯಾಧಿಕಾರಿಗಳು, ಪಿಡಿಓ, ವಿ.ಎ. ಅವರನ್ನೊಳಗೊಂಡ ತಂಡ ರಚಿಸಬೇಕು. ಎಂಡೋಸಲ್ಫಾನ್ ಬಾಧಿತ ಮಕ್ಕಳು ಮಾನಸಿಕ ಅಂಗವೈಕಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ನರಳುತ್ತಾರೆ. ಅವರನ್ನು ಗುರುತಿಸಿ, ಜಿಲ್ಲಾ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆ ಅಧಿಕಾರಿಗಳು ಗ್ರಾಮವಾರು ಎಂಡೋಸಲ್ಫಾನ್ ಸಂತ್ರಸ್ತರ ಪಟ್ಟಿಯನ್ನು ತಯಾರಿಸಿ ಅವರಿಗೆ ಅಗತ್ಯವಿರುವ ಔಷಧಗಳು ಹಾಗೂ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ತಪ್ಪದೇ ನೀಡಬೇಕು . ಅವರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಅವರು ಹೇಳಿದರು.

Advertisement

ದ ಕ ಜಿಲ್ಲೆಯಲ್ಲಿ 364 ಎಂಡೋಸಲ್ಫಾನ್ ಪೀಡಿತರು ಸಾವನ್ನಪ್ಪಿದ್ದು, 6314 ಮಂದಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಎಂಡೋಸಲ್ಫಾನ್ ಕೋಶ ನೋಡಲ್ ಅಧಿಕಾರಿ ಡಾ. ನವೀನ್‍ಚಂದ್ರ ಕುಲಾಲ್ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ., ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಆರೋಗ್ಯ ಇಲಾಖೆ ಎಂಡೋಸಲ್ಫಾನ್ ವಿಭಾಗದ ಸಮನ್ವಯಾಧಿಕಾರಿ ಸಜೀವುದ್ದೀನ್, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ | ಸಂಕ್ರಾಂತಿ ಶುಭತರಲಿ
January 14, 2025
7:21 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-01-2025 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಮುಂದೆ ತಾಪಮಾನ ಏರಿಕೆ ನಿರೀಕ್ಷೆ |
January 13, 2025
1:18 PM
by: ಸಾಯಿಶೇಖರ್ ಕರಿಕಳ
ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆ
January 12, 2025
9:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror