ಎಂಡೋಸಲ್ಫಾನ್ ಸಂತ್ರಸ್ತರ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಯಾ ಆರೋಗ್ಯ ಕೇಂದ್ರ ಮಟ್ಟದಲ್ಲಿ ಎಂಡೋ ಸಂತ್ರಸ್ತರು, ಅವರ ಪೋಷಕರು, ವೈದ್ಯಾಧಿಕಾರಿಗಳು, ಪಿಡಿಓ, ವಿ.ಎ. ಅವರನ್ನೊಳಗೊಂಡ ತಂಡ ರಚಿಸಬೇಕು. ಎಂಡೋಸಲ್ಫಾನ್ ಬಾಧಿತ ಮಕ್ಕಳು ಮಾನಸಿಕ ಅಂಗವೈಕಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ನರಳುತ್ತಾರೆ. ಅವರನ್ನು ಗುರುತಿಸಿ, ಜಿಲ್ಲಾ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆ ಅಧಿಕಾರಿಗಳು ಗ್ರಾಮವಾರು ಎಂಡೋಸಲ್ಫಾನ್ ಸಂತ್ರಸ್ತರ ಪಟ್ಟಿಯನ್ನು ತಯಾರಿಸಿ ಅವರಿಗೆ ಅಗತ್ಯವಿರುವ ಔಷಧಗಳು ಹಾಗೂ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ತಪ್ಪದೇ ನೀಡಬೇಕು . ಅವರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಅವರು ಹೇಳಿದರು.
ದ ಕ ಜಿಲ್ಲೆಯಲ್ಲಿ 364 ಎಂಡೋಸಲ್ಫಾನ್ ಪೀಡಿತರು ಸಾವನ್ನಪ್ಪಿದ್ದು, 6314 ಮಂದಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಎಂಡೋಸಲ್ಫಾನ್ ಕೋಶ ನೋಡಲ್ ಅಧಿಕಾರಿ ಡಾ. ನವೀನ್‍ಚಂದ್ರ ಕುಲಾಲ್ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ., ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಆರೋಗ್ಯ ಇಲಾಖೆ ಎಂಡೋಸಲ್ಫಾನ್ ವಿಭಾಗದ ಸಮನ್ವಯಾಧಿಕಾರಿ ಸಜೀವುದ್ದೀನ್, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?