ಕುಶಾಲನಗರ ತಾಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು( ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್.ಎಸ್.ಎಸ್.ಘಟಕ ಹಾಗೂ ವಿಜ್ಞಾನ ಸಂಘದ ವತಿಯಿಂದ ಶಾಲೆಯ ಕನ್ನಡ ಭಾಷಾ ಸಂಘ, ಸಮಾಜ ವಿಜ್ಞಾನ ಸಂಘದ ಆಶ್ರಯದಲ್ಲಿ ಭಾರತ ರತ್ನ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನವನ್ನು ಶಾಲೆಯಲ್ಲಿ ಆಚರಿಸಲಾಯಿತು.
ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ವಿದ್ಯಾರ್ಥಿಗಳು ಸರ್ ಎಂ.ವಿಶ್ವೇಶ್ವರಯ್ಯ ಅವರ ಸಾಧನೆ ಹಾಗೂ ಅವರು ದೇಶಕ್ಕೆ ಅಪಾರವಾಗಿ ನೀಡಿದ ಕೊಡುಗೆಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿಕೊಂಡು ಅವರ ಆದರ್ಶ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದರು.
ಎಂಜಿನಿಯರಿಂಗ್ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸರ್ ಎಂ ವಿಶ್ವೇಶ್ವರಯ್ಯನವರು ನೀಡಿರುವ ಗಣನೀಯ ಕೊಡುಗೆಗಳನ್ನು ವೃತ್ತಿಪರವಾಗಿ ಗೌರವಿಸಲು ಭಾರತ ಸರ್ಕಾರವು ಅವರ ಜನ್ಮದಿನವನ್ನು ಇಂಜಿನಿಯರ್ಸ್ ಡೇ ಎಂದು 1968 ರಲ್ಲಿ ಘೋಷಿಸಿದೆ ಎಂದರು.
ವಿಶ್ವೇಶ್ವರಯ್ಯ ಅವರ ಜೀವನ ಚರಿತ್ರೆ ಹಾಗೂ ಸಾಧನೆ ಕುರಿತು ಮಾಹಿತಿ ನೀಡಿದ ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ ,
ಸರ್ ಎಮ್ ವಿ ಎಂದು ಕರೆಯಲ್ಪಡುವ ಸರ್ ಎಂ ವಿಶ್ವೇಶ್ವರಯ್ಯ ಅವರು ನೂರು ವರ್ಷಗಳನ್ನು ಪೂರೈಸಿದ ದಂತಕಥೆಯಂತೆ ಬದುಕಿದ್ದರು, ತಮ್ಮ ಕೊನೆಯವರೆಗೂ ಸಕ್ರಿಯರಾಗಿದ್ದರು. ಸರ್ ಎಂ ವಿ ಅವರ ಜನ್ಮದಿನವನ್ನು ಇಂಜಿನಿಯರ್ಸ್ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.
ಸೆಪ್ಟೆಂಬರ್ 15, 1860 ರಂದು ಕರ್ನಾಟಕದ ಅವಿಭಜಿತ ಕೋಲಾರ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಎಂಬ ಸಣ್ಣ ಹಳ್ಳಿಯಲ್ಲಿ ಜನಿಸಿದ ಸರ್ ಎಂ.ವಿಶ್ವೇಶ್ವರಯ್ಯ ಅವರು ಮೊದಲ ಸ್ಥಳೀಯವಾಗಿ ನಿರ್ಮಿಸಲಾದ ಕೃಷ್ಣ ರಾಜ ಸಾಗರ ಅಣೆಕಟ್ಟು, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸ್ಥಾಪನೆ, ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು ಪೇಪರ್ ಮಿಲ್ಸ್, ಮೈಸೂರು ಕಬ್ಬಿಣ ಮತ್ತು ಉಕ್ಕು ಲಿಮಿಟೆಡ್ ನಂತರ, ವಿಶ್ವೇಶ್ವರಯ್ಯ ಐರನ್ ಮತ್ತು ಸ್ಟೀಲ್ಸ್ ಲಿಮಿಟೆಡ್ ಸೇರಿದಂತೆ ದೇಶದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ
ಸಾಧನೆಗಳನ್ನು ಮಾಡುವ ಮೂಲಕ ದೇಶ – ವಿದೇಶಗಳಲ್ಲಿ ಹೆಸರಾಂತ ಇಂಜಿನಿಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು ಎಂದರು.
ಶಿಕ್ಷಕರಾದ ಎಂ.ಟಿ.ದಯಾನಂದ ಪ್ರಕಾಶ್, ಬಿ.ಡಿ.ರಮ್ಯ, ಅನ್ಸಿಲಾ ರೇಖಾ, ವೈ.ಎಂ.ಸರಸ್ವತಿ, ಶಾಲಾ ನಾಯಕಿ ಸಂಜನಾ ಮೊದಲಾದವರು ಇದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…