ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಪರಿಸರ ಸಚಿವ ಈಶ್ವರ್ ಖಂಡ್ರೆ ಮನವಿ

October 19, 2024
10:56 PM
ಪರಿಸರಕ್ಕೆ ಹಾನಿ ಮಾಡುವ ಪಟಾಕಿಗಳಿಂದ ದೂರ ಇರುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕಿದೆ.

ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು ಹಿರಿಯ ನಾಗರಿಕರು ಮತ್ತು ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೆ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ. 

Advertisement

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರಿಸರಕ್ಕೆ ಹಾನಿ ಮಾಡುವ ಪಟಾಕಿಗಳಿಂದ ದೂರ ಇರುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು. ಜೊತೆಗೆ ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸೆದಂತೆಯೂ ಸಲಹೆ ನೀಡಿದ್ದಾರೆ. ರಾತ್ರಿ 8 ಗಂಟೆಯಿಂದ 10 ಗಂಟೆಯ ತನಕ ಮಾತ್ರ ಹಸಿರು ಪಟಾಕಿ ಬಳಸಲು ಅವಕಾಶ ಮಾಡಿಕೊಡಲಾಗಿದೆ. ಸಾರ್ವಜನಿಕರು ನಿಯಮಗಳನ್ನು ಚಾಚು ತಪ್ಪದೇ ಪಾಲಿಸಬೇಕು ಎಂದು ಸೂಚಿಸಿದ್ದಾರೆ.  ಸಂಘ-ಸಂಸ್ಥೆಗಳು, ಶಿಕ್ಷಕರು, ಬೋಧಕರು, ಉಪನ್ಯಾಸಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಜನರಲ್ಲಿ ಪಟಾಕಿಯ ದುಷ್ಪರಿಣಾಮಗಳ ಕುರಿತು ಅದರಲ್ಲೂ ಮಕ್ಕಳಲ್ಲಿ ಪಟಾಕಿ ತ್ಯಜಿಸುವಂತೆ ಜಾಗೃತಿ ಮೂಡಿಸಬೇಕು. ಪಟಾಕಿಗಳನ್ನು ತ್ಯಜಿಸಿ ದೀಪದಿಂದ ದೀಪ ಹಚ್ಚಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಎಂದು ಅವರು ಮನವಿ ಮಾಡಿದ್ದಾರೆ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ
April 2, 2025
11:46 PM
by: The Rural Mirror ಸುದ್ದಿಜಾಲ
ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |
April 2, 2025
9:31 PM
by: The Rural Mirror ಸುದ್ದಿಜಾಲ
ದೇಶದಲ್ಲಿ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ…!
April 2, 2025
8:51 PM
by: The Rural Mirror ಸುದ್ದಿಜಾಲ
ಯುಗಾದಿ ಹಾಗೂ ಮಲೆನಾಡಿನ ಅಡಿಕೆ ಭವಿಷ್ಯ ಏನು…? | ಮಲೆನಾಡಿನ ಅಡಿಕೆ ಬೆಳೆಗಾರರು ಎಚ್ಚರಿಕೆ ವಹಿಸಬೇಕಾದ್ದೇನು…?
April 2, 2025
7:17 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror

Join Our Group