ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು ಹಿರಿಯ ನಾಗರಿಕರು ಮತ್ತು ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೆ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರಿಸರಕ್ಕೆ ಹಾನಿ ಮಾಡುವ ಪಟಾಕಿಗಳಿಂದ ದೂರ ಇರುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು. ಜೊತೆಗೆ ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸೆದಂತೆಯೂ ಸಲಹೆ ನೀಡಿದ್ದಾರೆ. ರಾತ್ರಿ 8 ಗಂಟೆಯಿಂದ 10 ಗಂಟೆಯ ತನಕ ಮಾತ್ರ ಹಸಿರು ಪಟಾಕಿ ಬಳಸಲು ಅವಕಾಶ ಮಾಡಿಕೊಡಲಾಗಿದೆ. ಸಾರ್ವಜನಿಕರು ನಿಯಮಗಳನ್ನು ಚಾಚು ತಪ್ಪದೇ ಪಾಲಿಸಬೇಕು ಎಂದು ಸೂಚಿಸಿದ್ದಾರೆ. ಸಂಘ-ಸಂಸ್ಥೆಗಳು, ಶಿಕ್ಷಕರು, ಬೋಧಕರು, ಉಪನ್ಯಾಸಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಜನರಲ್ಲಿ ಪಟಾಕಿಯ ದುಷ್ಪರಿಣಾಮಗಳ ಕುರಿತು ಅದರಲ್ಲೂ ಮಕ್ಕಳಲ್ಲಿ ಪಟಾಕಿ ತ್ಯಜಿಸುವಂತೆ ಜಾಗೃತಿ ಮೂಡಿಸಬೇಕು. ಪಟಾಕಿಗಳನ್ನು ತ್ಯಜಿಸಿ ದೀಪದಿಂದ ದೀಪ ಹಚ್ಚಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಎಂದು ಅವರು ಮನವಿ ಮಾಡಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490