ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ

June 21, 2026
3:16 PM
ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ ಸಾಧ್ಯ ಎಂದು ಸಿಸ್ಟರ್ ಅರ್ಪಿತಾ ಹೇಳಿದರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ವಿವಿಧ ಗಿಡಗಳನ್ನು ವಿತರಿಸಲಾಯಿತು.

ಪರಿಸರ ಸಂರಕ್ಷಣೆ ಇಂದಿನ ಜಗತ್ತಿನ ಅತ್ಯಂತ ದೊಡ್ಡ ಸವಾಲಾಗಿದ್ದು, ಎಳೆಯ ಮನಸುಗಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಿದಾಗ ಮಾತ್ರ ಭವಿಷ್ಯದಲ್ಲಿ ಸ್ವಚ್ಛ ಮತ್ತು ಹಸಿರು ಪರಿಸರ ನಿರ್ಮಾಣ ಸಾಧ್ಯ ಎಂದು ಜೆಪ್ಪು ಸಂತ ಜೆರೋಸಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸಿಸ್ಟರ್ ಅರ್ಪಿತಾ ಅಭಿಪ್ರಾಯಪಟ್ಟರು.

ಚಿಣ್ಣರ ಚಾವಡಿ ಮಂಗಳೂರು ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೆಪ್ಪು ಸಂತ ಜೆರೋಸಾ ಪ್ರೌಢಶಾಲೆಯಲ್ಲಿ ಆಯೋಜಿಸಲಾದ “ಗಿಡ ಬೆಳೆಸೋಣ, ನಾಡು ಉಳಿಸೋಣ” ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಗಿಡ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ಹಾಳು ಮಾಡುತ್ತಿರುವ ಪರಿಣಾಮ ಇಡೀ ಭೂಮಂಡಲದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಕೆಲವರ ಸ್ವಾರ್ಥಲಾಲಸೆಯಿಂದ ಪರಿಸರಕ್ಕೆ ಹಾನಿಯಾಗುತ್ತಿರುವ ಇಂತಹ ಸಂದರ್ಭದಲ್ಲಿ ಮಕ್ಕಳಲ್ಲಿ ಪರಿಸರದ ಮಹತ್ವದ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣ ಮಾಡಿದ ಚಿಣ್ಣರ ಚಾವಡಿ ಮಂಗಳೂರು ಸಂಚಾಲಕ ಸುನಿಲ್ ಕುಮಾರ್ ಬಜಾಲ್, ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡ ನೆಟ್ಟು ಅದರ ಪೋಷಣೆ ಮಾಡಿದರೆ ಸಾವಿರಾರು ಜೀವಿಗಳಿಗೆ ಬದುಕಿನ ಆಸರೆಯಾಗಬಹುದು. ಹಸಿರು ಪರಿಸರ ನಿರ್ಮಾಣದಲ್ಲಿ ಪ್ರತಿಯೊಬ್ಬರೂ ತಮ್ಮ ಬದ್ಧತೆಯನ್ನು ತೋರಿಸಬೇಕಾಗಿದೆ ಎಂದು ಕರೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಾರ್ಯಕ್ರಮದಲ್ಲಿ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪ್ರಮುಖರಾದ ಅಸುಂತ ಡಿಸೋಜ, ಮರ್ಲಿನ್ ರೇಗೋ, ಫ್ಲೇವಿಕ್ರಾಸ್ತಾ ಅತ್ತಾವರ, ಯುವಜನ ನಾಯಕರಾದ ಜಗದೀಶ್ ಬಜಾಲ್, ಚಿಣ್ಣರ ಚಾವಡಿ ಅಧ್ಯಕ್ಷರಾದ ಆಡ್ಲಿನ್ ಸಿಕ್ವೇರಾ, ಕಾರ್ಯದರ್ಶಿ ಸಂಗಮೇಶ್ ಹಾಗೂ ಇತರ ಪದಾಧಿಕಾರಿಗಳಾದ ವಿಶಾಗಾ, ಇಯೋನ್ನಾ ಮತ್ತು ಮೌಲ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂತ್ಯದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ವಿವಿಧ ಜಾತಿಯ ಗಿಡಗಳನ್ನು ವಿತರಿಸಲಾಯಿತು.

Sister Arpita, Headmistress of St. Gerosa High School, Jeppu, emphasized that creating environmental awareness among children is essential for building a sustainable future. She was speaking at a sapling distribution program organized by Chinnara Chavadi Mangalore as part of World Environment Day celebrations.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-06-2026 | ಕರಾವಳಿ, ಮಲೆನಾಡಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಉಳಿದ ಭಾಗಗಳಲ್ಲಿ ಬಿಸಿಲು-ಮೋಡದ ವಾತಾವರಣ
July 11, 2026
2:14 PM
by: ಸಾಯಿಶೇಖರ್ ಕರಿಕಳ
ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚು | ಕಿತ್ತಳೆ ಬಣ್ಣಕ್ಕೆ ತಿರುಗಿದ ಆಕಾಶ, ಭೀಕರ ಕಾಡ್ಗಿಚ್ಚಿಗೆ 12 ಬಲಿ- ಸ್ಪೇನ್‌ನಲ್ಲಿ ಭಯಾನಕ ದುರಂತ
July 11, 2026
11:03 AM
by: ದ ರೂರಲ್ ಮಿರರ್.ಕಾಂ
ತೀವ್ರ ಬಿಸಿಗೆ ತುತ್ತಾಗುವ ನಗರಗಳಲ್ಲಿ ಭಾರತ ಅಗ್ರಸ್ಥಾನ: ವಿಶ್ವದ ಟಾಪ್-50 ಪಟ್ಟಿಯಲ್ಲಿ 14 ಭಾರತೀಯ ನಗರಗಳು
July 11, 2026
10:28 AM
by: ದ ರೂರಲ್ ಮಿರರ್.ಕಾಂ
ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ
July 11, 2026
6:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror