Advertisement
MIRROR FOCUS

ಹಬ್ಬಗಳ ಸಮಯದಲ್ಲಿ ಪರಿಸರಕ್ಕೆ ಹಾನಿ ಮಾಡುವುದು, ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿನಿಂದ ರಕ್ಷಿಸಲ್ಪಡದ ಧಾರ್ಮಿಕ ಆಚರಣೆಯಾಗಿದೆ: ನ್ಯಾಯಮೂರ್ತಿ ಓಕಾ

Share

ನಮ್ಮ ದೇಶದಲ್ಲಿ ಹಬ್ಬ, ಧಾರ್ಮಿಕ ಸಮಾರಂಭಗಳ ಸಮಯದಲ್ಲಿ ಪರಿಸರದ ಮೇಲೆ ಯಾವ ರೀತಿ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು ಯಾರೂ ಗಮನವಿಟ್ಟುಕೊಳ್ಳುವುದಿಲ್ಲ. ನದಿಗಳನ್ನು ಕಲುಷಿತಗೊಳಿಸುವುದು, ಪ್ರಾಣಿಬಲಿ, ವಾಯುಮಾಲಿನ್ಯ, ಶಬ್ದ ಮಾಲಿನ್ಯ ಇತ್ಯಾದಿಗಳನ್ನು ನಾವೇ ನಮ್ಮ ಹಬ್ಬಗಳಲ್ಲಿ ಮಾಡುತ್ತೇವೆ. ಇದರಿಂದ ಪರಿಸರದ ಮೇಲೆ ಅದೇಷ್ಟೋ ಪ್ರಭಾವ ಬೀರುತ್ತವೆ ಎಂಬುದನ್ನು ನಾವು ತಿಳಿಯಬೇಕು ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಅಭಯ್ ಓಕಾಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಪರಿಸರಕ್ಕೆ ಹಾನಿ ಮಾಡುವುದನ್ನು ಸಾಂವಿಧಾನಿಕ ಹಕ್ಕುಗಳಿಂದ ಹೇಗೆ ರಕ್ಷಿಸಲಾಗುವುದಿಲ್ಲ ಎಂಬುದರ ಬಗ್ಗೆ ತೀಕ್ಷ್ಣವಾದ ಎಚ್ಚರಿಕೆ ನೀಡಿದರು.  ಸಂವಿಧಾನವು ಪ್ರತಿಯೊಬ್ಬ ನಾಗರಿಕನು ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕೆಂದು ಹೇಳುತ್ತದೆಯಾದರೂ, ರಾಜಕಾರಣಿಗಳು ಹೆಚ್ಚಾಗಿ ಧಾರ್ಮಿಕ ಭಾವನೆಗಳನ್ನಷ್ಟೇ ಗಮನಿಸುತ್ತಾರೆ ಮತ್ತು ಮೂಢನಂಬಿಕೆಗಳನ್ನು ಪ್ರಶ್ನಿಸುವವರನ್ನು ಬೆಂಬಲಿಸುವ ಬದಲು ಅವರ ಮೇಲೆ ದಾಳಿ ಮಾಡಲಾಗುತ್ತದೆ. ಈ ಕಾರಣದಿಂದಾಗಿ ಭಾರತವು ಸವಾಲುಗಳನ್ನು ಎದುರಿಸುತ್ತಲೇ ಇದೆ ಎಂದು ಅವರು ಹೇಳಿದರು.

2027 ರಲ್ಲಿ ನಡೆಯಲಿರುವ ಕುಂಭಮೇಳಕ್ಕಾಗಿ ನೂರು ವರ್ಷ ಹಳೆಯ ಮರಗಳನ್ನು ಕಡಿಯುವ ಪ್ರಸ್ತಾಪವಿದೆ. ಇದರಿಂದ ಪರಸರಕ್ಕೆ ಯಾವ ರೀತಿ ಹಾನಿಯಾಗಬಹುದು ಎಂಬುದನ್ನು ತಿಳಿದುಕೊಳ್ಳಬೇಕಲ್ಲವೇ?. ಇದರಿಂದ  ನಾಗರಿಕರು ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆಂದು ಅರ್ಥವಾಗುತ್ತದೆ.  ಅಲ್ಲದೇ ಇದ್ದರೆ, ಹಬ್ಬಗಳ ಸಮಯದಲ್ಲಿ ಪ್ರಾಣಿಗಳನ್ನು ಕೊಲ್ಲುವುದು ಮತ್ತು ಬಲಿ ನೀಡುವುದು ಅಥವಾ ಧ್ವನಿವರ್ಧಕಗಳ ವಿವೇಚನಾರಹಿತ ಬಳಕೆಯನ್ನು ನಾವು ಅನುಮತಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಹಲವು ಹಬ್ಬಗಳು ಮತ್ತು ಆಚರಣೆಗಳು ನದಿಗಳು, ಸರೋವರಗಳು ಮತ್ತು ಸಮುದ್ರಗಳನ್ನು ಕಲುಷಿತಗೊಳಿಸುತ್ತವೆ, ಅಂತಹ ಮಾಲಿನ್ಯವು ಧಾರ್ಮಿಕ ಸ್ವಾತಂತ್ರ್ಯವೆಂದು ಸಮರ್ಥಿಸಲಾಗುವುದಿಲ್ಲ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

7 minutes ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

15 minutes ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

49 minutes ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

60 minutes ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

1 hour ago

ಕಾಶ್ಮೀರ ಕಣಿವೆಯ ಕಾಡುಗಳಲ್ಲಿ ಅಳಿವಿನ ಅಂಚಿನಲ್ಲಿರುವ ಅಪರೂಪದ ಕಾಡು ಮೇಕೆ

ಕಾಶ್ಮೀರ ಕಣಿವೆಯ ಕಾಡುಗಳಲ್ಲಿ ಅತ್ಯಂತ  ಗಮನ ಸೆಳೆಯುವ ಪೀರ್ ಪಂಜಾಲ್ ಪರ್ವತಶ್ರೇಣಿಯಲ್ಲಿ ಕಡಿದಾದ…

1 hour ago