ಪರಿಸರ ಮಾಲಿನ್ಯ ತಗ್ಗಬೇಕು, ಜನರಿಗೆ ಉತ್ತಮ ಸೇವೆ ಸಿಗಬೇಕು

October 2, 2024
10:20 PM

ಪರಿಸರ ಮಾಲಿನ್ಯ ತಗ್ಗಬೇಕು, ಜನರಿಗೆ ಉತ್ತಮ ಸೇವೆ ಸಿಗಬೇಕು ಎಂದು ವಿಮಾನ ನಿಲ್ದಾಣದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಚಾಲನೆ ನೀಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. 

Advertisement
Advertisement
Advertisement
Advertisement

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರಲ್ಲಿ ರಿಫೆಕ್ಸ್ ಗ್ರೂಪ್ ವತಿಯಿಂದ ಕಾರ್ಯಾಚರಣೆ ನಡೆಸಲಿರುವ 170 ಎಲೆಕ್ಟ್ರಿಕ್ ಕಾರುಗಳಿಗೆ ಡಿಸಿಎಂ ಅವರು ಚಾಲನೆ ನೀಡಿದರು.  ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ರಿಫೆಕ್ಸ್ ಸಂಸ್ಥೆಯವರು ಬೆಂಗಳೂರಿನಲ್ಲಿ ಗ್ರೀನ್ ಟ್ಯಾಕ್ಸಿ ಸೇವೆ ಮೂಲಕ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಿದ್ದಾರೆ. ಸುಮಾರು 170 ಕಾರುಗಳನ್ನು ಸೇವೆಗೆ ನೀಡಿದ್ದಾರೆ. ಸಂಸ್ಥೆಯವರು ಈಗಾಗಲೇ 450ಕ್ಕೂ ಹೆಚ್ಚು ಕಾರುಗಳನ್ನು ಹೊಂದಿದ್ದು, ಇದರ ಸಂಖ್ಯೆ 600ರ ಗಡಿ ದಾಟಲಿದೆ ಎಂದು ಹೇಳಿದ್ದಾರೆ.

Advertisement

ಬೆಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ₹699 ಹಾಗೂ ವಿಮಾನ ನಿಲ್ದಾಣದಿಂದ ನಗರಕ್ಕೆ ಸಾಮಾನ್ಯ ಶುಲ್ಕ ವಿಧಿಸುವುದಾಗಿ ಹೇಳಿದ್ದಾರೆ. ಈ ಕ್ಷೇತ್ರದಲ್ಲಿ ಹೆಚ್ಚಿನ ಸ್ಪರ್ಧೆ ಇದೆ. ಇದರಿಂದ ಜನರಿಗೆ ಉತ್ತಮ ಸೇವೆ ಸಿಗಬೇಕು.  ಇದರ ಜತೆಗೆ ಪಿಂಕ್ ಟ್ಯಾಕ್ಸಿ ಪರಿಕಲ್ಪನೆಯಲ್ಲಿ ಮಹಿಳೆಯರ ಪ್ರಯಾಣಕ್ಕೆ ಹಾಗೂ ಸುರಕ್ಷತೆಗೆ ಟ್ಯಾಕ್ಸಿ ಮೀಸಲಿಡಲಾಗಿದೆ. ಈ ವಿಚಾರವನ್ನು ನನಗೆ ತಿಳಿಸಿ ಪ್ರೋತ್ಸಾಹ ನೀಡುವಂತೆ ಮನವಿ ಮಾಡಿದರು. ಹೀಗಾಗಿ ನಾನು ಈ ಪ್ರಯತ್ನಕ್ಕೆ ಚಾಲನೆ ನೀಡಿದೆ. ಸಂಸ್ಥೆಗೆ ಒಳ್ಳೆಯದಾಗಲಿ ಜನರಿಗೆ ಉತ್ತಮ ಸೇವೆ ಸಿಗಲಿ ಎಂದು ಸರ್ಕಾರದ ಪರವಾಗಿ ತುಂಬು ಹೃದಯದ ಶುಭಾಶಯ ಅರ್ಪಿಸುತ್ತೇನೆ” ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror