ರಾಜ್ಯಾದ್ಯಂತ ಡೆಂಗ್ಯೂ ಭೀತಿ | ಕಳೆದ 24 ಗಂಟೆಯಲ್ಲಿ 293 ಮಂದಿಯಲ್ಲಿ ಡೆಂಗ್ಯೂ ಪತ್ತೆ | ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

July 11, 2024
12:41 PM

ಡೆಂಗ್ಯೂ(Dengue) ಮಹಾಮಾರಿ ಇಡೀ ರಾಜ್ಯದಲಲ್ಲಿ  ಕಾಣುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಬಾಧಿತರ ಸಂಖ್ಯೆ ಏರುತ್ತಲೇ ಇದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 293 ಮಂದಿಯಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಇದರಿಂದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 358ಕ್ಕೆ ಏರಿದೆ. ಬಿಬಿಎಂಪಿ(BBMP) ವ್ಯಾಪ್ತಿಯಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಹಾಗೆ ಎಲ್ಲಾ ಜಿಲ್ಲೆ, ತಾಲೂಕು, ಊರು, ಹಳ್ಳಿ- ಹಳ್ಳಿಗಳಲ್ಲೂ ತನ್ನ ಪ್ರತಾಪವನ್ನು ತೋರುತ್ತಿದೆ.

Advertisement
Advertisement

ಕಳೆದ 24 ಗಂಟೆಯಲ್ಲಿ 1874 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 293 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಇದರಲ್ಲಿ 1 ವರ್ಷದೊಳಗಿನ 2, 1 ರಿಂದ 18 ವರ್ಷದೊಳಗಿನ 101, 18 ವರ್ಷ ಮೇಲ್ಪಟ್ಟವರು 190 ಮಂದಿ ಇದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಸಾವಿನ ಪ್ರಮಾಣ ಶೇ.0.08 ಇದೆ. ಪ್ರಸ್ತುತ 100 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 7,840 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಒಟ್ಟು 7 ಮಂದಿ ಡೆಂಗ್ಯೂನಿಂದ ಮೃತಪಟ್ಟಿದ್ದಾರೆ. ಡೆಂಗ್ಯೂ ಪ್ರಕರಣಗಳ ಹೆಚ್ಚಳ ಸಂಬಂಧ ಬುಧವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಸ್ಲಂ‌ ನಿವಾಸಿಗಳಿಗೆ ಉಚಿತ ಸೊಳ್ಳೆ ಪರದೆ ನೀಡಲು ಸೂಚನೆ ನೀಡಿದ್ದಾರೆ. ಅಲ್ಲದೇ ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ನಿತ್ಯ ಪರಿಶೀಲನೆ ನಡೆಸುವಂತೆಯೂ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಒಟ್ಟು ಇಲ್ಲಿವರೆಗೆ (ಬುಧವಾರ) 7,362 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 303 ಸಕ್ರಿಯ ಡೆಂಗ್ಯೂ ಪ್ರಕರಣಗಳಿವೆ. ಈವರೆಗೆ ರಾಜ್ಯದಲ್ಲಿ 7 ಡೆಂಗ್ಯೂನಿಂದ ಸಾವುಗಳಾಗಿವೆ. ಸ್ಲಂ ನಿವಾಸಿಗಳಿಗೆ ಉಚಿತ ಸೊಳ್ಳೆ ಪರದೆ ನೀಡಲು ಸೂಚನೆ ನೀಡಲಾಗಿದೆ. ಎಲ್ಲಿ ಸೊಳ್ಳೆಗಳು ಹೆಚ್ಚಿರುತ್ತವೆ ಅಲ್ಲಿ ಉಚಿತ ಸೊಳ್ಳೆ ಪರದೆ ನೀಡಲಾಗುತ್ತದೆ ಎಂದು ಇದೇ ವೇಳೆ ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |
May 22, 2025
2:37 PM
by: ಸಾಯಿಶೇಖರ್ ಕರಿಕಳ
ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |
May 22, 2025
7:33 AM
by: The Rural Mirror ಸುದ್ದಿಜಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು
May 22, 2025
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group