ಡೆಂಗ್ಯೂ(Dengue) ಮಹಾಮಾರಿ ಇಡೀ ರಾಜ್ಯದಲಲ್ಲಿ ಕಾಣುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಬಾಧಿತರ ಸಂಖ್ಯೆ ಏರುತ್ತಲೇ ಇದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 293 ಮಂದಿಯಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಇದರಿಂದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 358ಕ್ಕೆ ಏರಿದೆ. ಬಿಬಿಎಂಪಿ(BBMP) ವ್ಯಾಪ್ತಿಯಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಹಾಗೆ ಎಲ್ಲಾ ಜಿಲ್ಲೆ, ತಾಲೂಕು, ಊರು, ಹಳ್ಳಿ- ಹಳ್ಳಿಗಳಲ್ಲೂ ತನ್ನ ಪ್ರತಾಪವನ್ನು ತೋರುತ್ತಿದೆ.
ಕಳೆದ 24 ಗಂಟೆಯಲ್ಲಿ 1874 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 293 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಇದರಲ್ಲಿ 1 ವರ್ಷದೊಳಗಿನ 2, 1 ರಿಂದ 18 ವರ್ಷದೊಳಗಿನ 101, 18 ವರ್ಷ ಮೇಲ್ಪಟ್ಟವರು 190 ಮಂದಿ ಇದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಸಾವಿನ ಪ್ರಮಾಣ ಶೇ.0.08 ಇದೆ. ಪ್ರಸ್ತುತ 100 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 7,840 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಒಟ್ಟು 7 ಮಂದಿ ಡೆಂಗ್ಯೂನಿಂದ ಮೃತಪಟ್ಟಿದ್ದಾರೆ. ಡೆಂಗ್ಯೂ ಪ್ರಕರಣಗಳ ಹೆಚ್ಚಳ ಸಂಬಂಧ ಬುಧವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಸ್ಲಂ ನಿವಾಸಿಗಳಿಗೆ ಉಚಿತ ಸೊಳ್ಳೆ ಪರದೆ ನೀಡಲು ಸೂಚನೆ ನೀಡಿದ್ದಾರೆ. ಅಲ್ಲದೇ ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ನಿತ್ಯ ಪರಿಶೀಲನೆ ನಡೆಸುವಂತೆಯೂ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಒಟ್ಟು ಇಲ್ಲಿವರೆಗೆ (ಬುಧವಾರ) 7,362 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 303 ಸಕ್ರಿಯ ಡೆಂಗ್ಯೂ ಪ್ರಕರಣಗಳಿವೆ. ಈವರೆಗೆ ರಾಜ್ಯದಲ್ಲಿ 7 ಡೆಂಗ್ಯೂನಿಂದ ಸಾವುಗಳಾಗಿವೆ. ಸ್ಲಂ ನಿವಾಸಿಗಳಿಗೆ ಉಚಿತ ಸೊಳ್ಳೆ ಪರದೆ ನೀಡಲು ಸೂಚನೆ ನೀಡಲಾಗಿದೆ. ಎಲ್ಲಿ ಸೊಳ್ಳೆಗಳು ಹೆಚ್ಚಿರುತ್ತವೆ ಅಲ್ಲಿ ಉಚಿತ ಸೊಳ್ಳೆ ಪರದೆ ನೀಡಲಾಗುತ್ತದೆ ಎಂದು ಇದೇ ವೇಳೆ ತಿಳಿಸಿದ್ದಾರೆ.
ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…