ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಅಬ್ಬಯ್ಯ ಪ್ರಸಾದ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ 13ನೇ ಒಣ ಮೆಣಸಿನಕಾಯಿ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಬೆಳಗಾರರಿಗೆ ತರಬೇತಿ ನೀಡುವ ಕೇಂದ್ರ ಕೊಚ್ಚಿನ್‌ನಲ್ಲಿದೆ. ಅದೇ ತರಬೇತಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದರು.ಗದಗ, ಹಾವೇರಿ ಜಿಲ್ಲೆಗಳಲ್ಲಿ ಹೆಚ್ಚಾಗಿ ಮೆಣಸಿನಕಾಯಿ ಬೆಳೆಯಲಾಗುತ್ತದೆ. ರೈತರು ದೇಶದ ಬೆನ್ನೆಲುಬು, ಅವರಿಗೆ ಶಕ್ತಿ ತುಂಬಲು ಮೇಳವನ್ನು ಆಯೋಜನೆ ಮಾಡಲಾಗಿದೆ. ರೈತರ ಪರಿಸ್ಥಿತಿ ಸುಧಾರಿಸಬೇಕಿದೆ. ರೈತರು ಹೆಚ್ಚಾಗಿ ಮೇಳದಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ತಿಳಿಸಿದರು.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…