Advertisement
MIRROR FOCUS

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

Share

ಎಥೆನಾಲ್‌ ಉತ್ಪಾದನೆ ಕೃಷಿ ಕ್ಷೇತ್ರಕ್ಕೆ ದೊಡ್ಡ ಅವಕಾಶವಾಗಿದ್ದು, ಇದು ರೈತ ಕೇಂದ್ರಿತ ನೀತಿಯಾಗಿರುವುದರಿಂದ ಬೆಳೆಗೆ ನ್ಯಾಯಯುತ ಬೆಲೆ ನೇರವಾಗಿ ರೈತರ ಕೈ ಸೇರಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ದೆಹಲಿಯಲ್ಲಿ ನಡೆದ ಅಖಿಲ ಭಾರತ ಕಿಸಾನ್ ಸಮನ್ವಯ ಸಮಿತಿಯ ನಿಯೋಗದೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರೈತ ನಾಯಕರ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಹೇಳಿದರು.

ಎಥೆನಾಲ್‌ ನೀತಿಗೆ ಸರ್ಕಾರದ ಬದ್ಧತೆ :  ಎಥೆನಾಲ್‌ ನೀತಿಯು ಕೇವಲ ಪರ್ಯಾಯ ಇಂಧನ ಉತ್ಪಾದನೆಗೆ ಸೀಮಿತವಾಗಿಲ್ಲ. ಇದು ರೈತರ ಆದಾಯ ಹೆಚ್ಚಿಸುವ ಜೊತೆಗೆ ದೇಶದ ಇಂಧನ ಭದ್ರತೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಸಚಿವರು ಹೇಳಿದರು.

ಬೆಳೆಗಳಿಗೆ ಉತ್ತಮ ಮಾರುಕಟ್ಟೆ ದೊರೆಯುವುದರಿಂದ ರೈತರಿಗೆ ಆರ್ಥಿಕ ಲಾಭವಾಗಲಿದ್ದು, ದೇಶದ ಇಂಧನ ಆಮದು ಮೇಲಿನ ಅವಲಂಬನೆಯೂ ಕಡಿಮೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ರೈತ ಸಂಘಟನೆಗಳು ನೀತಿ ಪಾಲುದಾರರು :  ರೈತ ಸಂಘಟನೆಗಳನ್ನು ಸರ್ಕಾರದ ವಿರೋಧಿಗಳಾಗಿ ನೋಡುವ ಬದಲು, ಕೃಷಿ ನೀತಿಗಳ ರೂಪಿಕರಣದಲ್ಲಿ ಪ್ರಮುಖ ಪಾಲುದಾರರಾಗಿ ಸರ್ಕಾರ ಪರಿಗಣಿಸುತ್ತದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ರೈತರ ಅಭಿಪ್ರಾಯಗಳನ್ನು ಆಲಿಸಿ, ಕೃಷಿ ಕ್ಷೇತ್ರಕ್ಕೆ ಅನುಕೂಲವಾಗುವ ನೀತಿಗಳನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ರೈತ ಮುಖಂಡರು ಎಥೆನಾಲ್‌ ಉತ್ಪಾದನೆಗೆ ಬಲವಾದ ಬೆಂಬಲ ವ್ಯಕ್ತಪಡಿಸಿದರು. ಮೆಕ್ಕೆಜೋಳ, ಕಬ್ಬು ಸೇರಿದಂತೆ ಎಥೆನಾಲ್‌ ಉತ್ಪಾದನೆಗೆ ಬಳಸುವ ಯಾವುದೇ ಬೆಳೆಗೆ ರೈತರಿಗೆ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Union Agriculture Minister Shivraj Singh Chouhan said ethanol presents a major opportunity for Indian agriculture by ensuring better prices for farmers while strengthening the country’s energy security. During a meeting with farmer leaders, he assured that the government would seriously consider their suggestions and emphasized that farmer organizations are policy partners, not opponents.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

33 minutes ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

2 hours ago

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

8 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

8 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

16 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

16 hours ago