ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ಮಾ. 18 ರಂದು ದೆಹಲಿಗೆ ತೆರಳುತ್ತಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಅರಣ್ಯ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಭೆ ನಂತರ ಮಾತನಾಡಿದ ಅವರು, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟಕರವಾಗಿದೆ. 508 ಎಕರೆ ವಿಸ್ತೀರ್ಣದ ಅರಣ್ಯ ಭೂಮಿ ಬಳಕೆಗೆ ದೆಹಲಿಗೆ ತೆರಳಿ ಕೇಂದ್ರ ಪರಿಸರ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಎಲ್ಲಾ ಅಡೆತಡೆಗಳನ್ನು ನಿವಾರಿಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರನ್ನು ಕೊಂಡೊಯ್ಯಲಾಗುವುದು ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel