ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ ಆದ್ಯತೆ ಮೇರೆಗೆ, ಶಾಶ್ವತ ಕುಡಿಯುವ ನೀರು ಪೂರೈಸಲು ಕ್ರಮಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಸದಸ್ಯ ಜಿ.ಕೆ.ವೆಂಕಟಶಿವಾರೆಡ್ಡಿ ಅವರು ಗಮನ ಸೆಳೆಯುವ ಸೂಚನೆ ವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಅವರು ಮಾಹಿತಿ ನೀಡಿದರು. ಪ್ರಶ್ನೋತ್ತರ ವೇಳೆಯಲ್ಲಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸರ್ಕಾರಿ ಜಮೀನನ್ನು ಯಾರೇ ಅತಿಕ್ರಮಣ ಮಾಡಿದಲ್ಲಿ, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




