ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು ತುಂಬಿಸಲಾಗುವುದು ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ ಕೋಲಾರದಲ್ಲಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಆರಂಭವಾಗುವ ಈ ಯೋಜನೆಯಡಿ ವಿವಿಧ ಜಿಲ್ಲೆಗಳ ಕೆರೆಗಳನ್ನು ತುಂಬಿಸಲು ನಿರ್ಧರಿಸಲಾಗಿತ್ತು. ಆದರೆ, ಕೊನೆಯ ಭಾಗದ ಈ ಮೂರು ಜಿಲ್ಲೆಗಳಿಗೆ ನೀರಿನ ಲಭ್ಯತೆ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳು ಮತ್ತು ನಾನು ಆತಂಕ ವ್ಯಕ್ತಪಡಿಸಿದ್ದರು. ಈ ಭಾಗದ ಜನಪ್ರತಿನಿಧಿಗಳ ಮನವಿ ಮೇರೆಗೆ ಮುಖ್ಯಮಂತ್ರಿ, ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ನಿರ್ಧಾರ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

