ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

May 2, 2026
10:58 AM
ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ ನೀರಾವರಿ ಯೋಜನೆಗಳ ಪ್ರಗತಿಗೆ ಸರ್ಕಾರ ವೇಗ ನೀಡಲು ಕ್ರಮ ಕೈಗೊಂಡಿದೆ.

ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗಳ ಪ್ರಗತಿ ಕುರಿತು ವಿಧಾನಸೌಧದಲ್ಲಿ  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗಳ ಪ್ರಗತಿ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು.

ಸಭೆಯ ನಂತರ ಮಾತನಾಡಿದ ಉಪಮುಖ್ಯಮಂತ್ರಿಗಳು, ಎತ್ತಿನಹೊಳೆ ಯೋಜನೆಯ ಬಾಕಿ ಇರುವ ಕಾಮಗಾರಿಗಳನ್ನು ಒಂದು ವಾರದೊಳಗೆ ಪುನಾರಂಭಿಸಲು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ತುಮಕೂರು ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ವೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಶೀಘ್ರದಲ್ಲೇ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ನೀರು ಪೂರೈಕೆ ಮಾಡುವ ಗುರಿ ಹೊಂದಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಡಿಪಿಆರ್ ಸಿದ್ಧವಾಗಿದ್ದು, ಯೋಜನಾ ಪ್ರದೇಶದಲ್ಲಿ ಸುಮಾರು 5,300 ಎಕರೆ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಬೇಕಿದೆ. ಈ ಪ್ರಕ್ರಿಯೆಯನ್ನು ಕಂದಾಯ ಇಲಾಖೆಯೊಂದಿಗೆ ಚರ್ಚಿಸಿ ವೇಗಗೊಳಿಸಲಾಗುವುದು ಎಂದು ತಿಳಿಸಿದರು.

ಈ ಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿರುವುದು ಸ್ಪಷ್ಟವಾಗುತ್ತಿದೆ.

Deputy CM D.K. Shivakumar has directed officials to restart pending works of the Ettinahole project within a week. Progress of major irrigation projects including Mekedatu and Bhadra has been reviewed to ensure faster implementation.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror