Advertisement
MIRROR FOCUS

ಎತ್ತಿನಹೊಳೆ ಯೋಜನೆಗೆ ಅತ್ಯಂತ ಎತ್ತರದ ಮೇಲ್ಗಾಲುವೆ | ತುಮಕೂರು ಜಿಲ್ಲೆ ಚೇಳೂರು ಬಳಿ ನಿರ್ಮಾಣ

Share

ಕೋಲಾರ– ಚಿಕ್ಕಬಳ್ಳಾಪುರ ಸೇರಿದಂತೆ ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಎತ್ತಿನಹೊಳೆ ಯೋಜನೆಗೆ ತುಮಕೂರು ಜಿಲ್ಲೆ ಬೆಳ್ಳಾವಿಯ ಬಳಿಯ ಚೇಳೂರು ಎಂಬಲ್ಲಿ ನಿರ್ಮಾಣವಾಗಿರುವ ಅಕ್ವಾಡಾಕ್ಟ್ ಮೇಲ್‌ ಕಾಲುವೆ ಈಗ ಗಮನ ಸೆಳೆಯುತ್ತಿದೆ. ದೇಶದ ಅತಿ ಎತ್ತರದ ಹಾಗೂ ಏಷ್ಯಾದಲ್ಲಿಯೇ ಅತಿ ಉದ್ದದ ಮೇಲ್ಗಾಲುವೆ ಇದಾಗಿದೆ. 10.4 ಕಿಲೋಮೀಟರ್ ಉದ್ದದ ಈ ಮೇಲ್ಗಾಲುವೆ ಕಾಮಗಾರಿ 2018ರಲ್ಲಿ ಆರಂಭವಾಗಿತ್ತು.

ಕೋವಿಡ್-19 ಮತ್ತು ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಎದುರಾದ ಸವಾಲುಗಳಿಂದ ವಿಳಂಬವಾಗಿ 2023ರಲ್ಲಿ ಪೂರ್ಣಗೊಂಡಿದ್ದು, ಇದೀಗ ರಾಷ್ಟ್ರ ಮನ್ನಣೆ ಪಡೆದುಕೊಂಡಿದೆ. ಸುಮಾರು 1 ಸಾವಿರದ 203 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಅಕ್ವಾಡಾಕ್ಟ್ 120 ಅಡಿ ಎತ್ತರದಲ್ಲಿದ್ದು, 3,300 ಕ್ಯೂಸೆಕ್ ನೀರನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಕೇವಲ ನೀರಿನ ಸಾಗಾಟದ ದೃಷ್ಟಿಯಿಂದ ಮಾತ್ರವಲ್ಲದೇ ಆಧುನಿಕ ಇಂಜಿನಿಯರಿಂಗ್ ತಂತ್ರಜ್ಞಾನದ ಪ್ರಗತಿಯನ್ನು ಇದು ಪ್ರದರ್ಶಿಸಲಿದೆ. ಈ ಅಕ್ವಾಡಾಕ್ಟ್ ಕೇಂದ್ರ ಸರ್ಕಾರದಿಂದ ಮೆಚ್ಚಗೆಗೆ ಪಾತ್ರವಾಗಿದ್ದು, ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದುಕೊಂಡಿದೆ.

ಎತ್ತಿನಹೊಳೆ ಯೋಜನೆಯ ತುಮಕೂರು ವಿಭಾಗದ ಮುಖ್ಯ ಎಂಜಿನಿಯರ್ ಎಚ್.ಎಸ್. ಆನಂದ್, ಮೇಲ್ಗಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಶ್ವದ ವಿವಿಧ ಯೋಜನೆಗಳನ್ನು ಪರಿಶೀಲಿಸಿ ಅಧ್ಯಯನ ಮಾಡಲಾಗಿದೆ. ಇದರ ನಿರ್ಮಾಣ ಕಾಮಗಾರಿಗೆ  ಭಾರತೀಯ ವಿಜ್ಞಾನ ಸಂಸ್ಥೆಯ ಸಲಹೆ ಪಡೆದುಕೊಳ್ಳಲಾಗಿದೆ. ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ನಮ್ಮ ಮೆಟ್ರೋ ಈ ಯೋಜನೆಯ ತಾಂತ್ರಿಕ ನೆರವು ಪಡೆದುಕೊಳ್ಳಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

56 minutes ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 hour ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

13 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

23 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

24 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 day ago