ಕೋಲಾರ– ಚಿಕ್ಕಬಳ್ಳಾಪುರ ಸೇರಿದಂತೆ ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಎತ್ತಿನಹೊಳೆ ಯೋಜನೆಗೆ ತುಮಕೂರು ಜಿಲ್ಲೆ ಬೆಳ್ಳಾವಿಯ ಬಳಿಯ ಚೇಳೂರು ಎಂಬಲ್ಲಿ ನಿರ್ಮಾಣವಾಗಿರುವ ಅಕ್ವಾಡಾಕ್ಟ್ ಮೇಲ್ ಕಾಲುವೆ ಈಗ ಗಮನ ಸೆಳೆಯುತ್ತಿದೆ. ದೇಶದ ಅತಿ ಎತ್ತರದ ಹಾಗೂ ಏಷ್ಯಾದಲ್ಲಿಯೇ ಅತಿ ಉದ್ದದ ಮೇಲ್ಗಾಲುವೆ ಇದಾಗಿದೆ. 10.4 ಕಿಲೋಮೀಟರ್ ಉದ್ದದ ಈ ಮೇಲ್ಗಾಲುವೆ ಕಾಮಗಾರಿ 2018ರಲ್ಲಿ ಆರಂಭವಾಗಿತ್ತು.
ಕೋವಿಡ್-19 ಮತ್ತು ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಎದುರಾದ ಸವಾಲುಗಳಿಂದ ವಿಳಂಬವಾಗಿ 2023ರಲ್ಲಿ ಪೂರ್ಣಗೊಂಡಿದ್ದು, ಇದೀಗ ರಾಷ್ಟ್ರ ಮನ್ನಣೆ ಪಡೆದುಕೊಂಡಿದೆ. ಸುಮಾರು 1 ಸಾವಿರದ 203 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಅಕ್ವಾಡಾಕ್ಟ್ 120 ಅಡಿ ಎತ್ತರದಲ್ಲಿದ್ದು, 3,300 ಕ್ಯೂಸೆಕ್ ನೀರನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಕೇವಲ ನೀರಿನ ಸಾಗಾಟದ ದೃಷ್ಟಿಯಿಂದ ಮಾತ್ರವಲ್ಲದೇ ಆಧುನಿಕ ಇಂಜಿನಿಯರಿಂಗ್ ತಂತ್ರಜ್ಞಾನದ ಪ್ರಗತಿಯನ್ನು ಇದು ಪ್ರದರ್ಶಿಸಲಿದೆ. ಈ ಅಕ್ವಾಡಾಕ್ಟ್ ಕೇಂದ್ರ ಸರ್ಕಾರದಿಂದ ಮೆಚ್ಚಗೆಗೆ ಪಾತ್ರವಾಗಿದ್ದು, ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದುಕೊಂಡಿದೆ.
ಎತ್ತಿನಹೊಳೆ ಯೋಜನೆಯ ತುಮಕೂರು ವಿಭಾಗದ ಮುಖ್ಯ ಎಂಜಿನಿಯರ್ ಎಚ್.ಎಸ್. ಆನಂದ್, ಮೇಲ್ಗಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಶ್ವದ ವಿವಿಧ ಯೋಜನೆಗಳನ್ನು ಪರಿಶೀಲಿಸಿ ಅಧ್ಯಯನ ಮಾಡಲಾಗಿದೆ. ಇದರ ನಿರ್ಮಾಣ ಕಾಮಗಾರಿಗೆ ಭಾರತೀಯ ವಿಜ್ಞಾನ ಸಂಸ್ಥೆಯ ಸಲಹೆ ಪಡೆದುಕೊಳ್ಳಲಾಗಿದೆ. ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ನಮ್ಮ ಮೆಟ್ರೋ ಈ ಯೋಜನೆಯ ತಾಂತ್ರಿಕ ನೆರವು ಪಡೆದುಕೊಳ್ಳಲಾಗಿದೆ ಎಂದರು.
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…