ಎತ್ತಿನಹೊಳೆ ಯೋಜನೆ | ಮೊದಲ ಹಂತದ ಏತ, ವಿದ್ಯುತ್ ಪೂರೈಕೆ ಕಾಮಗಾರಿ ಪೂರ್ಣ |

August 23, 2024
10:29 PM
ಎತ್ತಿನಹೊಳೆ ಯೋಜನೆಯನ್ನು 2027 ರ ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯದ  ಕುಡಿಯುವ ನೀರಿನ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯು ನಿರ್ಣಾಯಕ ಘಟ್ಟ ತಲುಪಿದೆ.…..ಮುಂದೆ ಓದಿ….

Advertisement
Advertisement
Advertisement

2014 ರಲ್ಲಿ ಆರಂಭಗೊಂಡ ಯೋಜನೆಯ ಮೊದಲನೇ ಹಂತದ ಏತ ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಬಹುದಿನಗಳಿಂದ ಉದ್ಭವಿಸಿದ್ದ ಅಡಚಣೆಗಳನ್ನು ನಿವಾರಿಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಈ ಯೋಜನೆಯಡಿ ಗುರುತ್ವ ಕಾಲುವೆಗೆ ನೀರನ್ನು ಹರಿಸಲು ಯೋಜಿಸಲಾಗಿದೆ. ಗುರುತ್ವ ಕಾಲುವೆಯು ಒಟ್ಟು  252.61  ಕಿಲೋ ಮೀಟರ್ ಉದ್ದವಿದ್ದು, ಈ ಪೈಕಿ 42 ಕಿಲೋ ಮೀಟರ್ ವರಗಿನ ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳು ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಪೂರ್ಣಗೊಂಡಿಲ್ಲ.ಈ ಹಿನ್ನೆಲೆಯಲ್ಲಿ ಗುರುತ್ವ ಕಾಲುವೆಯ 32.50 ಕಿಲೋ ಮೀಟರ್ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ಸುಮಾರು 123.50  ಕಿಲೋ ಮೀಟರ್ ದೂರದಲ್ಲಿರುವ ವಾಣಿ ವಿಲಾಸ ಸಾಗರಕ್ಕೆ ವೇದಾ ವ್ಯಾಲಿಯ ಮುಖಾಂತರ ತಾತ್ಕಾಲಿಕವಾಗಿ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ.

Advertisement

ಇದರ ಅನ್ವಯ ನಾಲಾ ಎಸ್ಕೇಪ್ ಮೂಲಕ ನೀರು ವೇದಾ ವ್ಯಾಲಿಯನ್ನು ಪ್ರವೇಶಿಸಿದ್ದು, ಈಗಾಗಲೇ ಹಳೇಬೀಡು ಮತ್ತು ಬೆಳವಾಡಿ ಕೆರೆಗಳು ತುಂಬಿ ಕೋಡಿ ಬಿದ್ದು, ವಾಣಿ ವಿಲಾಸ ಸಾಗರದತ್ತ ನೀರು ಹರಿಯುತ್ತಿದೆ. ಪ್ರಸಕ್ತ ವಿಯರ್-3 ಅನ್ನು ಹೊರತುಪಡಿಸಿ, ಉಳಿದ ಎಲ್ಲಾ ವಿಯರ್ ಗಳಿಂದ ಸೆಪ್ಟಂಬರ್-5 ರೊಳಗೆ ಪೂರ್ವ ಪರೀಕ್ಷಾರ್ಥವಾಗಿ ನೀರನ್ನೆತ್ತಿ ಗುರುತ್ವ ಕಾಲುವೆಗೆ ಪೂರೈಸಲು ಯೋಜಿಸಲಾಗಿದೆ. ಒಟ್ಟಾರೆ ಎತ್ತಿನಹೊಳೆ ಯೋಜನೆಯನ್ನು 2027 ರ ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Sorce : DD

Advertisement
ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Advertisement

 

The Ettinahole Integrated Drinking Water Scheme, a key drinking water project in the state, has reached  a crucial stage. The initial phase of the project, which commenced in 2014, has been successfully completed after overcoming significant obstacles related to the implementation of elevation and power supply components.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?
January 22, 2025
6:48 AM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕಾಲಾವಧಿ ನೇಮ
January 21, 2025
3:55 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror