ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಗಾಗಿ ಎದುರುನೋಡುತ್ತಿವೆ ಎಂದು ತಿಳಿಸಿದರು. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ ಎಂದು ಹೇಳಿದರು. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಈ ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel