ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಕಾಮಗಾರಿ ಉದ್ಘಾಟನೆ – ಡಿ ಕೆ ಶಿವಕುಮಾರ್

September 1, 2024
9:03 PM

ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಗಾಗಿ ಎದುರುನೋಡುತ್ತಿವೆ ಎಂದು ತಿಳಿಸಿದರು. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ ಎಂದು ಹೇಳಿದರು. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಈ ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ
May 8, 2026
7:31 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror