ದಾವಣಗೆರೆಯ 19 ಕೇಂದ್ರಗಳಲ್ಲಿ ಡಿ. 29 ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್‌ನ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ನಡೆದ ಮರು ಪರೀಕ್ಷೆಯ ಸಿದ್ಧತಾ ಸಭೆ ಹಾಗೂ ಪರೀಕ್ಷಾ ಕೇಂದ್ರಗಳ ಪರಿವೀಕ್ಷಕರು, ಮಾರ್ಗಾಧಿಕಾರಿಗಳು ಮತ್ತು ವೀಕ್ಷಕರಿಗೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ಮತ್ತು ಯಾವುದೇ ದೂರುಗಳು ಬಾರದಂತೆ ನಡೆಸಲು ಆಯೋಗದ ನಿರ್ದೇಶನಗಳನ್ನು ಪಾಲಿಸಬೇಕು ಎಂದರು. ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ, ಆಸನದ ವ್ಯವಸ್ಥೆ, ಬಂದೋಬಸ್ತ್ ಸೇರಿದಂತೆ ಎಲ್ಲವನ್ನೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel