ವೈದ್ಯ ವೃತ್ತಿಗೆ(Doctor) ಸೇರ್ಪಡೆಗೊಳ್ಳುವ ವಿದ್ಯಾರ್ಥಿಗಳ(Students) ಕನಸನ್ನು ನನಸು ಮಾಡಿಕೊಳ್ಳಲು ಬರೆಯಬೇಕಾದ ಪರೀಕ್ಷೆ ನೀಟ್(NEET). ಇದೀಗ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) 720ಕ್ಕೆ 720 ಅಂಕಗಳನ್ನು ಗಳಿಸಿರುವ 67 ಅಭ್ಯರ್ಥಿಗಳು(Candidates) ನೂತನ ದಾಖಲೆ(Record) ನಿರ್ಮಿಸಿದ್ದಾರೆ. ನೀಟ್ ಪರೀಕ್ಷೆ ಮೇ 5ರಂದು ನಡೆದಿತ್ತು. 23 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 10 ಲಕ್ಷ ಪುರುಷ ಅಭ್ಯರ್ಥಿಗಳು ಮತ್ತು 13 ಲಕ್ಷ ಮಹಿಳಾ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(National Exam Agency) ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಬಹುದು. ಈ ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳು 720ಕ್ಕೆ 720 ಅಂಕಗಳನ್ನು ಪಡೆದಿದ್ದಾರೆ.
ನೀಟ್ ಪರೀಕ್ಷೆಯಲ್ಲಿ ರಾಜ್ಯದ ಮೂವರು ಟಾಪರ್: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶ ಪ್ರಕಟಗೊಂಡಿದ್ದು, ಕರ್ನಾಟಕ ರಾಜ್ಯದ ಮೂವರು ಅಭ್ಯರ್ಥಿಗಳು ಅಖಿಲ ಭಾರತ ಶ್ರೇಣಿಯಲ್ಲಿ 720ಕ್ಕೆ 720 ಅಂಕ ಪಡೆದಿದ್ದಾರೆ. ಪ್ರಥಮ ಸ್ಥಾನ ಗಳಿಸಿದ ದೇಶದ 67 ಅಭ್ಯರ್ಥಿಗಳಲ್ಲಿ ಬೆಂಗಳೂರಿನ ನಾರಾಯಣ ಕಾಲೇಜಿನ ಸ್ಯಾಮ್ ಶ್ರೇಯಸ್ ಜೋಸೆಫ್, ಚೈತನ್ಯ ಶಿಕ್ಷಣ ಸಂಸ್ಥೆಯ ಕಲ್ಯಾಣ್ ವಿ, ಹಾಗೂ ಮಂಗಳೂರು ಎಕ್ಸ್‌ಪರ್ಟ್ ಕಾಲೇಜಿನ ಅರ್ಜುನ್ ಕಿಶೋರ್ ಸ್ಥಾನ ಪಡೆದಿದ್ದಾರೆ.
ಕಲ್ಯಾಣ್ ಅವರು ಪಶುವೈದ್ಯಕೀಯ ವಿಜ್ಞಾನ, ಬಿ ಫಾರ್ಮಾ, ಡಿ ಫಾರ್ಮಾ ಮತ್ತು ಬಿಎಸ್‌ಸಿ ನರ್ಸಿಂಗ್‌ನಲ್ಲಿ ಮೊದಲ ರ್‍ಯಾಂಕ್ ಪಡೆದುಕೊಳ್ಳುವ ಸಿಇಟಿಯಲ್ಲೂ ಪ್ರಥಮ ಸ್ಥಾನ ಪಡೆದಿದ್ದಾರೆ. ಕಲ್ಯಾಣ್ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಎಂಎಸ್) ವಿದ್ಯಾಭ್ಯಾಸ ಮಾಡುವ ಗುರಿ ಹೊಂದಿದ್ದಾರೆ.
ರಾಜ್ಯದ ಆರು ಅಭ್ಯರ್ಥಿಗಳು ಅಖಿಲ ಭಾರತ ಮಟ್ಟದ ನೂರರೊಳಗಿನ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಕರ್ನಾಟಕದ 1,50,171 ಅಭ್ಯರ್ಥಿಗಳು ನೀಟ್ ಬರೆದಿದ್ದರು. ಈ ಪೈಕಿ 89,088 ಅಭ್ಯರ್ಥಿಗಳು ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದುಕೊಂಡಿದ್ದಾರೆ. ಇಂಗ್ಲಿಷ್, ಕನ್ನಡ, ಹಿಂದಿ ಸೇರಿದಂತೆ 13 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. 1,065 ಅಭ್ಯರ್ಥಿಗಳು ಕನ್ನಡದಲ್ಲಿ ಬರೆಯಲು ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿದ್ದರು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿದೆ. 2023ರಲ್ಲಿ ರಾಜ್ಯದ 75,248 ಅಭ್ಯರ್ಥಿಗಳು ಹಾಗು 2022ರಲ್ಲಿ 72,262 ಅಭ್ಯರ್ಥಿಗಳು ಅರ್ಹತೆ ಪಡೆದುಕೊಂಡಿದ್ದರು.
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…